ಹೊಸದಿಗಂತ ಡಿಜಿಟಲ್ ಡೆಸ್ಕ್:
ಈಜಿಪ್ಟ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರಿಗೆ ಇಂದು ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಈಜಿಪ್ಟ್‌ನ ಅತ್ಯುನ್ನತ ರಾಜ್ಯ ಗೌರವವಾದ ‘ಆರ್ಡರ್ ಆಫ್ ದಿ ನೈಲ್’ ನೀಡಿ ಗೌರವಿಸಿದ್ದಾರೆ.
ಜಗತ್ತಿನ ವಿವಿಧ ದೇಶಗಳು ಪ್ರಧಾನಿ ಮೋದಿಯವರಿಗೆ ನೀಡುತ್ತಿರುವ 13ನೇ ಅತ್ಯುನ್ನತ ರಾಜ್ಯ ಗೌರವ ಇದಾಗಿದೆ.
ಈಜಿಪ್ಟ್ ಕಾಲಮಾನದಲ್ಲಿ ಇಂದು ಬೆಳಗ್ಗೆ, ಪ್ರಧಾನಿ ಮೋದಿ ಈಜಿಪ್ಟ್‌ನ 11 ನೇ ಶತಮಾನದ ಐತಿಹಾಸಿಕ ಅಲ್-ಹಕೀಮ್ ಮಸೀದಿ ಮತ್ತು ಕೈರೋದಲ್ಲಿನ ಹೆಲಿಯೊಪೊಲಿಸ್ ಕಾಮನ್‌ವೆಲ್ತ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದರು. ಅಲ್ಲದೆ, ಪ್ರಧಾನಿ ಮೋದಿ ಅವರು ಈಜಿಪ್ಟ್ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಉಭಯ ದೇಶಗಳ ನಡುವೆ ಕೆಲ ಒಪ್ಪಂದಗಳಿಗೂ ಸಹಿ ಹಾಕಲಾಗಿದೆ.
26 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಈಜಿಪ್ಟ್ ಜತೆ ನಡೆಸುತ್ತಿರುವ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ಜಿ-20 ಶೃಂಗಸಭೆಗಾಗಿ ಎಲ್-ಸಿಸಿ ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ ಪ್ರಯಾಣಿಸಲಿದ್ದು, ಈಜಿಪ್ಟ್ ಅನ್ನು ವಿಶೇಷ ಅತಿಥಿಯಾಗಿ ಆಹ್ವಾನಿಸಲಾಗಿದೆ.