ಬೆಳಗಾವಿಯಲ್ಲಿ ಕಿಸಾನ್ ಸಮ್ಮಾನ್ ಯೋಜನೆಯ 13 ನೇ ಕಂತಿನ ಹಣ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಯಲ್ಲಿ ಕಿಸಾನ್ ಸಮ್ಮಾನ್ ಯೋಜನೆಯ 13 ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ.

ಬೆಳಗಾವಿ ನಗರದ ಮಾಲಿನಿ ಸಿಟಿ ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ನಡೆಯುತ್ತಿದ್ದು, ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತಿನ ಹಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ನೇರವಾಗಿ ಫಲಾನುಭವಿಗಳ ಖಾತೆಗೆ ನೇರವಾಗಿ ಬಿಡುಗಡೆ ಮಾಡಿದ್ದಾರೆ.
ದೇಶದ ಒಟ್ಟು 8 ಕೋಟಿ ರೈತರ ಖಾತೆಗೆ ತಲಾ 2 ಸಾವಿರದಂತೆ 16 ಸಾವಿರ ಕೋಟಿ ರೂಪಾಯಿ. ಇದರಲ್ಲಿ ಕರ್ನಾಟಕ ರಾಜ್ಯದ 49.55 ರೈತರಿಗೆ 991 ಕೋಟಿ ರೂಪಾಯಿಗಳನ್ನು ಪ ವರ್ಗಾವಣೆ ಮಾಡಿದ್ದಾರೆ.

ಜೊತೆಗೆ ಜನಜೀವನ ಮಿಷನ್ ಯೋಜನೆಯಡಿ ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದಂತೆ ಒಟ್ಟು 1120 ಕೋಟಿ ರೂಪಾಯಿ ವೆಚ್ಚದ ವಿವಿಧ ತಾಲ್ಲೂಕುಗಳ ಐದು ಬಹುಗ್ರಾಮ ಕುಡಿಯುವ ನೀರು ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಲೋಂಡಾ- ಬೆಳಗಾವಿ- ಘಟಪ್ರಭಾ ಡಬ್ಲಿಂಗ್‌ ರೈಲು ಮಾರ್ಗವನ್ನು ಅವರು ದೇಶಕ್ಕೆ ಸಮರ್ಪಣೆ ಮಾಡುವರು. ನವೀಕರಣಗೊಂಡ ಬೆಳಗಾವಿ ರೈಲು ನಿಲ್ದಾಣ ಹಾಗೂ ಜಲಜೀನ್‌ ಮಿಷನ್‌ ಅಡಿ ನಡೆದ ಕಾಮಗಾರಿಗಳನ್ನು ಉದ್ಘಾಟಿಸುವರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!