ʻಕಿಸಾನ್ ಸಮ್ಮಾನ್ ನಿಧಿʼಯ 16 ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಸಮ್ಮಾನ್ ನಿಧಿಯ 16 ನೇ ಕಂತನ್ನು ಇಂದು ಮಹಾರಾಷ್ಟ್ರದ ಯವತ್ಮಾಲ್ ನಲ್ಲಿ ಬಿಡುಗಡೆ ಮಾಡಿದರು.

9 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ಒಟ್ಟು 21,000 ಕೋಟಿ ರೂಗೂ ಹೆಚ್ಚಿನ ಮೊತ್ತವನ್ನು ಪ್ರಧಾನಿ ಮೋದಿ ರಿಮೋಟ್ ಬಟನ್ ಒತ್ತುವ ಮೂಲಕ ರವಾನೆ ಮಾಡಿದ್ದಾರೆ. ಈ ಮೂಲಕ ಫಲಾನುಭವಿಗಳ ಖಾತೆಗಳಿಗೆ ತಲಾ 2,000 ರೂ ಸಿಗಲಿದೆ.

2019ರಲ್ಲಿ ಆರಂಭವಾದ ಪಿಎಂ ಕಿಸಾನ್ ಯೋಜನೆಯಲ್ಲಿ ಇಲ್ಲಿಯವರೆಗೆ 16 ಕಂತುಗಳನ್ನು ರೈತರ ಖಾತೆಗಳಿಗೆ ಬಿಡುಗಡೆ ಮಾಡಲಾಗಿದೆ. ಐದು ವರ್ಷದಲ್ಲಿ ಒಟ್ಟಾರೆ 3 ಲಕ್ಷ ಕೋಟಿ ರೂ ಹಣ ರೈತರಿಗೆ ಸಿಕ್ಕಿದೆ.

ಈ ಯೋಜನೆಯಲ್ಲಿ ಕೇಂದ್ರ ಸರ್ಕಾರ ಅರ್ಹ ರೈತರಿಗೆ ವರ್ಷಕ್ಕೆ 6,000 ರೂ ಒದಗಿಸುತ್ತದೆ. ನಾಲ್ಕು ತಿಂಗಳಿಗೊಮ್ಮೆಯಂತೆ 2,000 ರೂಗಳನ್ನು ನೀಡಲಾಗುತ್ತದೆ. ಡಿಸೆಂಬರ್​ನಿಂದ ಮಾರ್ಚ್​ವರೆಗೆ ಒಂದು ಕಂತು, ಏಪ್ರಿಲ್​ನಿಂದ ಜುಲೈವರೆಗೆ ಇನ್ನೊಂದು ಕಂತು, ಹಾಗೂ ಆಗಸ್ಟ್​​ನಿಂದ ನವೆಂಬರ್​​ವರೆಗೆ ಮಗದೊಂದು ಕಂತು ಹೀಗೆ ವರ್ಷಕ್ಕೆ ಮೂರು ಕಂತುಗಳಲ್ಲಿ ರೈತರಿಗೆ ಹಣ ಒದಗಿಸಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!