ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೇರಿಕ ಪ್ರವಾಸ ಮುಗಿಸಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಭಾರತಕ್ಕೆ ಮರಳಿದ್ದಾರೆ.
ಭಾರತಕ್ಕೆ ಹೊರಡುವ ಮುನ್ನ ಇಸ್ರೇಲ್-ಹಮಾಸ್ ಯುದ್ಧ ಮತ್ತು ಉಕ್ರೇನ್ ಬಿಕ್ಕಟ್ಟು ಸೇರಿದಂತೆ ಜಾಗತಿಕ ಸಂಘರ್ಷಗಳ ಹಿನ್ನೆಲೆ ಯುಎನ್‌ನ ) ಭವಿಷ್ಯದ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಮೊದಲ ದಿನ ಅಮೇರಿಕಾದ ಡೆಲವೇರ್‌ನ ವಿಲ್ಮಿಂಗ್ಟನ್‌ನಲ್ಲಿ ನಡೆದ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದರು.ಇ
ಎರಡನೇ ದಿನ ಶನಿವಾರ ನ್ಯೂಯಾರ್ಕ್‌ಗೆ ಆಗಮಿಸಿ ಯುಎಸ್ ಅಧ್ಯಕ್ಷ ಜೋ ಬೈಡೆನ್ ಅವರೊಂದಿಗೆ ದ್ವಿಪಕ್ಷೀಯ ಚರ್ಚೆಗಳನ್ನು ನಡೆಸಿದರು.
ಮೂರನೇ ದಿನ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ಅರ್ಮೇನಿಯಾ ಪ್ರಧಾನಿ ನಿಕೋಲ್ ಪಶಿನ್ಯಾನ್ ಮತ್ತು ಇತರ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಿದರು.