Wednesday, November 12, 2025

ಭೂತಾನ್‌ನಿಂದ ಬಂದಿಳಿದ ಕೂಡಲೇ ದೆಹಲಿ LNJP ಆಸ್ಪತ್ರೆಗೆ ಪ್ರಧಾನಿ ಮೋದಿ ದೌಡು: ಗಾಯಾಳುಗಳ ಆರೋಗ್ಯ ವಿಚಾರಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಕೆಂಪು ಕೋಟೆಯ ಬಳಿ ನಡೆದ ಸ್ಫೋಟದಲ್ಲಿ ಒಟ್ಟು 13 ಮಂದಿ ಮೃತಪಟ್ಟಿದ್ದು, 20 ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇತ್ತ ಭೂತಾನ್‌ನಿಂದ ಹಿಂದಿರುಗಿದ ಕೂಡಲೇ ಪ್ರಧಾನಿ ನರೇಂದ್ರ ಮೋದಿ ಬುಧವಾರ ದೆಹಲಿಯ ಲೋಕ ನಾಯಕ್ ಜೈ ಪ್ರಕಾಶ್ (ಎಲ್‌ಎನ್‌ಜೆಪಿ) ಆಸ್ಪತ್ರೆಯಲ್ಲಿ ಕೆಂಪು ಕೋಟೆ ಸ್ಫೋಟದಲ್ಲಿ ಗಾಯಗೊಂಡವರನ್ನು ಭೇಟಿಯಾಗಿ, ಮಾತನಾಡಿದ್ದಾರೆ.

ಗಾಯಾಳುಗಳನ್ನು ಪ್ರತ್ಯೇಕವಾಗಿ ಭೇಟಿಯಾಗಿ ಸಂವಾದ ನಡೆಸಿದ ಪ್ರಧಾನಿ, ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು. ಆಸ್ಪತ್ರೆಯ ಅಧಿಕಾರಿಗಳು ಮತ್ತು ವೈದ್ಯರು ಮೋದಿಗೆ ಮಾಹಿತಿ ನೀಡಿದರು.

https://x.com/narendramodi/status/1988541418915172514?ref_src=twsrc%5Etfw%7Ctwcamp%5Etweetembed%7Ctwterm%5E1988541418915172514%7Ctwgr%5Ed908c108474b0b5ef2adc1c9fa41571f80afcc3d%7Ctwcon%5Es1_&ref_url=https%3A%2F%2Fvishwavani.news%2Fnational%2Fpm-meets-red-fort-blast-survivors-in-hospital-after-returning-from-bhutan-60515.html

‘ದೆಹಲಿಯಲ್ಲಿ ನಡೆದ ಸ್ಫೋಟದ ಸಂದರ್ಭದಲ್ಲಿ ಎಲ್‌ಎನ್‌ಜೆಪಿ ಆಸ್ಪತ್ರೆಗೆ ಹೋಗಿ ಗಾಯಗೊಂಡವರನ್ನು ಭೇಟಿಯಾದೆ. ಎಲ್ಲರೂ ಬೇಗನೆ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಪಿತೂರಿಯ ಹಿಂದಿರುವವರನ್ನು ನ್ಯಾಯದ ಕಟಕಟೆಗೆ ತರಲಾಗುವುದು!’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

error: Content is protected !!