ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿರಂತರ ಪ್ರಯತ್ನದಿಂದ ಮಾತ್ರ ಭಾರತವನ್ನು ಶುದ್ಧೀಕರಿಸಲು ಸಾಧ್ಯ. ಈ ಕಾರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ್ ಮಿಷನ್ ಅನ್ನು ಮತ್ತಷ್ಟು ಬಲಪಡಿಸುವಂತೆ ಜನರಲ್ಲಿ ಮನವಿ ಮಾಡಿದರು.
ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನಾಚರಣೆ ಅಂಗವಾಗಿ ದೆಹಲಿಯ ಗಾಂಧಿ ಸ್ಮಾರಕಕ್ಕೆ ತೆರಳಿ ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, 2014ರಲ್ಲಿ ಆರಂಭವಾದ ರಾಷ್ಟ್ರೀಯ ಸ್ವಚ್ಛತಾ ಅಭಿಯಾನವಾದ ಸ್ವಚ್ಛ ಭಾರತ್ ಮಿಷನ್ ಹತ್ತು ವರ್ಷ ಪೂರೈಸಿದೆ.
ಈ ಮಹತ್ವದ ದಿನವನ್ನು ಗುರುತಿಸಲು, ನಾನು ಶಾಲಾ ಮಕ್ಕಳೊಂದಿಗೆ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದೆ. ಇಂತಹ ಕಾರ್ಯಕ್ರಮಗಳಲ್ಲಿ ನಾಗರಿಕರು ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.