ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದಕ್ಕೆ ಕರ್ನಾಟಕದಲ್ಲಿ ಆಕ್ರೋಶ ಭುಗಿಲೆದ್ದಿದೆ. ನಮಗೆ ಕುಡಿಯಲು ನೀರಿಲ್ಲ ಎಂದು ರೈತರು ಕಣ್ಣೀರಿಡುತ್ತಿದ್ದಾರೆ.
ರಸ್ತೆ ತಡೆ, ಮೆರವಣಿಗೆ, ಪ್ರತಿಭಟನೆಯಲ್ಲಿ ರೈತರು ನಿರಂತರವಾಗಿ ತೊಡಗಿಕೊಂಡಿದ್ದು, ಈ ಸಮಸ್ಯೆಗೆ ಪರಿಹಾರ ಪ್ರಧಾನಿ ಮೋದಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಿ ಮಾತುಕತೆ ನಡೆಸಬೇಕು, ಇದೇ ಈ ಸಮಸ್ಯೆಗೆ ಪರಿಹಾರ ಎಂದಿದ್ದಾರೆ. ಈಗಾಗಲೇ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಪ್ರಧಾನಿ ಮೋದಿಗೆ ಪತ್ರ ಬರೆಯುವ ಮೂಲಕ ಮಧ್ಯಪ್ರವೇಶಿಸುವಂತೆ ಹೇಳಿದ್ದಾರೆ.
ನಮ್ಮ ನಾಡಿಗೆ ಆಗುತ್ತಿರುವ ಅನ್ಯಾಯ ತಪ್ಪಿಸಲು ಪ್ರಧಾನಿ ಮೋದಿ ಅವರು ಮಧ್ಯಸ್ಥಿಕೆ ವಹಿಸಬೇಕು, ಇದು ಪರಿಣಾಮಕಾರಿಯಾಗಲಿದೆ ಎಂದಿದ್ದಾರೆ.