ಇಂದು ಪ್ರಧಾನಿ ಮೋದಿಯವರ ‘ಮನ್ ಕಿ ಬಾತ್’ 104ನೇ ಸಂಚಿಕೆ ಪ್ರಸಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್‌ನ 104 ನೇ ಸಂಚಿಕೆಯನ್ನು ಉದ್ದೇಶಿಸಿ ಇಂದು ಮಾತನಾಡಲಿದ್ದಾರೆ. ಕಾರ್ಯಕ್ರಮವು ಇಂದು ಬೆಳಗ್ಗೆ ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನಿ, “ಭಾನುವಾರ ಬೆಳಗ್ಗೆ 11 ಗಂಟೆಗೆ ʼಮನ್‌ ಕಿ ಬಾತ್‌ʼ ಕೇಳಿ. ಭಾರತದಾದ್ಯಂತ ಸ್ಪೂರ್ತಿದಾಯಕ ಜೀವನ ಪ್ರಯಾಣಗಳ ಬಗ್ಗೆ ಮಾತನಾಡಲು ನನಗೆ ಯಾವಾಗಲೂ ಸಂತೋಷವಾಗುತ್ತದೆ” ಎಂದು ಬರೆದುಕೊಂಡಿದ್ದಾರೆ.

‘ಮನ್ ಕಿ ಬಾತ್’ ನ 103 ನೇ ಆವೃತ್ತಿಯನ್ನು ಜುಲೈ 30 ರಂದು ಪ್ರಸಾರ ಮಾಡಲಾಯಿತು. ಪ್ರಧಾನಿ ಮೋದಿ ಮೊದಲ ಬಾರಿಗೆ ‘ಮೇರಿ ಮಾತಿ ಮೇರಾ ದೇಶ್’ ಅಭಿಯಾನವನ್ನು ಪ್ರಸ್ತಾಪಿಸಿದರು.

ಕಾರ್ಯಕ್ರಮವನ್ನು ಆಲ್ ಇಂಡಿಯಾ ರೇಡಿಯೋ ಮತ್ತು ದೂರದರ್ಶನದ ಸಂಪೂರ್ಣ ನೆಟ್‌ ವರ್ಕ್, AIR ನ್ಯೂಸ್ ವೆಬ್‌ ಸೈಟ್ ಮತ್ತು ನ್ಯೂಸ್‌ ಏರ್ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ.
ಎಐಆರ್ ನ್ಯೂಸ್, ಡಿಡಿ ನ್ಯೂಸ್, ಪಿಎಂಒ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಯೂಟ್ಯೂಬ್ ಚಾನೆಲ್‌ಗಳಲ್ಲಿ ಲೈವ್-ಸ್ಟ್ರೀಮ್ ಆಗುತ್ತದೆ. ಹಿಂದಿ ಪ್ರಸಾರದ ನಂತರ ತಕ್ಷಣವೇ ಪ್ರಾದೇಶಿಕ ಭಾಷೆಗಳಲ್ಲಿ ಕಾರ್ಯಕ್ರಮವನ್ನು AIR ಪ್ರಸಾರ ಮಾಡುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!