ಮಾತೃ ವಿಯೋಗದ ದಿನವೂ ನಿಗದಿತ ಕಾರ್ಯಕ್ರಮ ತಪ್ಪಿಸದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಾತೃ ವಿಯೋಗದ ದಿನವೂ ನಿಗದಿತ ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದಾರೆ. ತಮ್ಮ ತಾಯಿ ಹೀರಾಬೆನ್ ಮೋದಿ ಅವರ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಲು ಇಂದು ಮುಂಜಾನೆ ಗಾಂಧಿನಗರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪಶ್ಚಿಮ ಬಂಗಾಳದಲ್ಲಿ ಇಂದಿನ ನಿಗದಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.

ಈಗಾಗಲೇ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪಶ್ಚಿಮ ಬಂಗಾಳದ ಹೌರಾದಿಂದ ನ್ಯೂ ಜಲ್ಪೈಗುರಿಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ಚಾಲನೆ ನೀಡಿದರು.

ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಪಶ್ಚಿಮ ಬಂಗಾಳದಲ್ಲಿ ಪ್ರಮುಖ ಸಂಪರ್ಕ-ಸಂಬಂಧಿತ ಯೋಜನೆಗಳಿಗೆ ಚಾಲನೆ ಮತ್ತು ರಾಷ್ಟ್ರೀಯ ಗಂಗಾ ಕೌನ್ಸಿಲ್‌ನ ಸಭೆಯನ್ನು ಒಳಗೊಂಡಿವೆ ಎಂದು ಪ್ರಧಾನ ಮಂತ್ರಿ ಕಚೇರಿ ಇಂದು ಟ್ವೀಟ್ ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ಇಂದು 7,800 ಕೋಟಿಗೂ ಹೆಚ್ಚು ಮೌಲ್ಯದ ಯೋಜನೆಗಳ ಶಂಕುಸ್ಥಾಪನೆಯನ್ನು ಒಳಗೊಂಡಿದೆ.

ಕಾರ್ಯಕ್ರಮದ ವೇಳಾಪಟ್ಟಿಯ ಪ್ರಕಾರ, ಕೋಲ್ಕತ್ತಾ ಮೆಟ್ರೋದ ಪರ್ಪಲ್ ಲೈನ್‌ನ ಜೋಕಾ-ತಾರಾಟಾಲಾ ವಿಸ್ತರಣೆ ಹಾಗೂ ಇತರ ಕೆಲವು ಯೋಜನೆಗಳನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!