ಮಹಾರಾಷ್ಟ್ರಕ್ಕೆ ನಾಳೆ ಪ್ರಧಾನಿ ಮೋದಿ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರ ದ ಪಾಲಘಡ್​ ಮತ್ತು ಮುಂಬೈಗೆ ಶುಕ್ರವಾರ (ಆ. 30) ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಲಿದ್ದು, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ವಿಧಾನಸಭೆ ಚುನಾವಣೆ ಹೊಸ್ತಿನಲ್ಲಿ ಪ್ರಧಾನಿ ಮೋದಿ ಅವರು ಮಹಾರಾಷ್ಟ್ರ ಭೇಟಿ ಮಹತ್ವ ಪಡೆದುಕೊಂಡಿದೆ. ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜನೆಗೊಂಡಿರುವ ಗ್ಲೋಬಲ್ ಫಿನ್‌ಟೆಕ್ ಫೆಸ್ಟ್-2024 ಅನ್ನು ಬೆಳಗ್ಗೆ 11ಕ್ಕೆ ಉದ್ಘಾಟಿಸಲಿದ್ದಾರೆ.

ಈ ಸಮಾವೇಶವನ್ನು ಪೇಮೆಂಟ್ಸ್ ಕೌನ್ಸಿಲ್ ಆಫ್ ಇಂಡಿಯಾ, ನ್ಯಾಶನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಮತ್ತು ಫಿನ್‌ಟೆಕ್ ಕನ್ವರ್ಜೆನ್ಸ್ ಕೌನ್ಸಿಲ್ ಜಂಟಿಯಾಗಿ ಅಯೋಜಿಸಿದೆ. ಇದರಲ್ಲಿ ಸುಮಾರು 800 ಜನ ಪಾಲ್ಗೊಳ್ಳಲಿದ್ದಾರೆ. ನೀತಿ ನಿರೂಪಕರು, ನಿಯಂತ್ರಕರು, ಹಿರಿಯ ಬ್ಯಾಂಕರ್‌ಗಳು, ಉದ್ಯಮದ ಮುಖಂಡರು ಮತ್ತು ಶಿಕ್ಷಣ ತಜ್ಞರು ಪಾಲ್ಗೊಳ್ಳಲಿದ್ದಾರೆ. ಒಟ್ಟು 350 ಗೋಷ್ಠಿಗಳು ನಡೆಯಲಿವೆ. ವಿದೇಶಿಗಳಿಂದಲೂ ಹಲವರು ಇದರಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 1.30ಕ್ಕೆ ಪಾಲಗಢದ ಸಿಡ್ಕೊ ಮೈದಾನದಲ್ಲಿ ಸಿಡಿಸಿಒ ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ವಾಧವಾನ್ ಬಂದರು ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ.

1,560 ಕೋಟಿ ಮೌಲ್ಯದ 218 ಮೀನುಗಾರಿಕೆ ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಉದ್ಘಾಟಿಸಲಿದ್ದಾರೆ. ಮೀನುಗಾರಿಗೆ ಕ್ಷೇತ್ರದಲ್ಲಿ ಇದು 5 ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಇಲಾಖೆ ಹೇಳಿದೆ ಎಂದು ವರದಿಯಾಗಿದೆ.

360 ಕೋಟಿ ರೂ. ವೆಚ್ಚದ ವೆಸ್ಸೆಲ್ ಕಮ್ಯುನಿಕೇಷನ್ ಅಂಡ್ ಸಪೋರ್ಟ್ ಸಿಸ್ಟಂ ಅನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ. ಇದರಿಂದ 13 ಕರಾವಳಿ ತೀರ ಹೊಂದಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಅನುಕೂಲವಾಗಲಿದೆ. ಈ ಯೋಜನೆಯನ್ನು ಇಸ್ರೊ ಅಭಿವೃದ್ಧಿಪಡಿಸಿದೆ.

ಮೀನುಗಾರಿಕೆ ಬಂದರುಗಳು ಮತ್ತು ಇಂಟಿಗ್ರೇಟೆಡ್ ಅಕ್ವಾಪಾರ್ಕ್‌ಗಳನ್ನು ಮೋದಿ ಉದ್ಘಾಟಿಸಲಿದ್ದಾರೆ. ಈ ಯೋಜನೆ ಹಲವು ರಾಜ್ಯಗಳಲ್ಲೂ ಅನುಷ್ಠಾನಗೊಳ್ಳಲಿದೆ. ಇದರಿಂದ ಮತ್ಸೋಧ್ಯಮ, ಕೊಯ್ಲು ನಿರ್ವಹಣೆ ಹಾಗೂ ಮೀನುಗಾರಿಕೆಯಲ್ಲಿ ತೊಡಗಿರುವವರು ಸುಸ್ಥಿರ ಜೀವನೋಪಾಯವನ್ನು ಸುಧಾರಿಸುವ ಗುರಿಯನ್ನು ಹೊಂದಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!