ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾರ್ಚ್ 30 ರಂದು ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಸಂಸ್ಥಾಪಕ ಡಾ. ಕೆ.ಬಿ. ಹೆಡ್ಗೆವಾರ್ ಅವರ ಸ್ಮಾರಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಲಿದ್ದಾರೆ.
ಮಹಾರಾಷ್ಟ್ರ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಚಂದ್ರಶೇಖರ್ ಬವಾಂಕುಲೆ ಅವರು ಗುರುವಾರ ನಾಗ್ಪುರದಲ್ಲಿ ಸುದ್ದಿಗಾರರಿಗೆಮಾಹಿತಿ ನೀಡಿದ್ದು, ಆರ್‌ಎಸ್‌ಎಸ್ ಸಂಸ್ಥಾಪಕ ಡಾ. ಕೆ.ಬಿ. ಹೆಡ್ಗೆವಾರ್ ಮತ್ತು ಅವರ ಉತ್ತರಾಧಿಕಾರಿ ಎಂ.ಎಸ್. ಗೋಲ್ವಾಲ್ಕರ್ ಅವರ ಅಂತಿಮ ವಿಶ್ರಾಂತಿ ಸ್ಥಳವಾದ ರೇಶಿಂಬಾಗ್‌ನಲ್ಲಿರುವ ಪೂಜ್ಯ ಸ್ಮೃತಿ ಮಂದಿರಕ್ಕೆ ಪ್ರಧಾನಿ ಭೇಟಿ ನೀಡಲಿದ್ದಾರೆ.ಈ ವೇಳೆ ಮಾಧವ್ ನೇತ್ರಾಲಯ ಪ್ರೀಮಿಯಂ ಸೆಂಟರ್‌ನ ವಿಸ್ತರಣಾ ಕಟ್ಟಡಕ್ಕೆ ಪ್ರಧಾನಿ ಮೋದಿ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.