ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗೆ ರಿಲೀಸ್ ಆದ ‘ದಿ ಸಾಬರಮತಿ ರಿಪೋರ್ಟ್’ ಚಿತ್ರಕ್ಕೆ ವಿಮರ್ಶಕರಿಂದ ಮೆಚ್ಚುಗೆ ಸಿಕ್ಕಿದೆ. ಈ ಸಿನಿಮಾದಲ್ಲಿ ವಿಕ್ರಾಂತ್ ಮಾಸ್ಸಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾನ ಬಾಕ್ಸ್ ಆಫೀಸ್ನಲ್ಲೂ ಉತ್ತಮ ಗಳಿಕೆ ಮಾಡುತ್ತಿದೆ. ಈಗ ಪ್ರಧಾನಿ ನರೇಂದ್ರ ಮೋದಿ ಅವರು ಈ ಸಿನಿಮಾ ವೀಕ್ಷಿಸಲಿದ್ದಾರೆ. ದೆಹಲಿಯಲ್ಲಿರುವ ಬಾಲಯೋಗಿ ಆಡಿಟೋರಿಯಂನಲ್ಲಿ ಇಂದು (ಡಿಸೆಂಬರ್ 2) ಸಂಜೆ ಸಿನಿಮಾ ವೀಕ್ಷಿಸಲಿದ್ದಾರೆ.
2002ರ ಫೆಬ್ರವರಿ 27ರಂದು ಸೆನ್ಸೇಷನಲ್ ಘಟನೆ ನಡೆದಿತ್ತು. ಕರಸೇವಕರು ಪ್ರಯಾಣ ಮಾಡುತ್ತಿದ್ದ ಸಾಬರಮತಿ ಎಕ್ಸ್ಪ್ರೆಸ್ ರೈಲಿನ ಎಸ್-6 ಕೋಚ್ಗೆ ಗುಜರಾತ್ನ ಗೋದ್ರಾ ಬಳಿ ಬೆಂಕಿ ಹಚ್ಚಲಾಗಿತ್ತು. ಇದು ಗುಜರಾತ್ನಲ್ಲಿ ಕೋಮುಗಲಭೆ ಕಾರಣ ಆಯಿತು. ಈ ಘಟನೆಯನ್ನು ಆಧರಿಸಿ ‘ದಿ ಸಾಬರಮತಿ ಎಕ್ಸ್ಪ್ರೆಸ್’ ಸಿನಿಮಾ ಸಿದ್ಧಗೊಂಡಿದೆ. ಈ ಚಿತ್ರವನ್ನು ವೀಕ್ಷಿಸುವ ಮೋದಿ ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ನವೆಂಬರ್ 15ರಂದು ‘ದಿ ಸಾಬರಮತಿ ರಿಪೋರ್ಟ್’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರ ರಿಲೀಸ್ ಆದ ಬಳಿಕ ಮೋದಿ ಅವರು ಚಿತ್ರದ ಬಗ್ಗೆ ಮಾತನಾಡಿದ್ದರು. ‘ಸಾಮಾನ್ಯ ಜನರು ನೋಡುವ ರೀತಿಯಲ್ಲಿ ಸತ್ಯ ಹೊರಗೆ ಬರುತ್ತಿರುವುದು ಒಳ್ಳೆಯ ವಿಷಯ. ಕ್ಷಣಿಕ ಕಾಲಕ್ಕೆ ಮಾತ್ರ ಸುಳ್ಳಿನ ನಿರೂಪಣೆ ಇರಬಹುದು. ಕೊನೆಗೂ ಸತ್ಯ ಹೊರಗೆ ಬರುತ್ತದೆ’ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದರು. ಈಗ ಬಿಡುವು ಮಾಡಿಕೊಂಡು ಅವರು ಸಿನಿಮಾ ವೀಕ್ಷಿಸುತ್ತಿದ್ದಾರೆ.