74ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ಮೋದಿ: ಗಣ್ಯರಿಂದ ಶುಭಾಶಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಧಾನಮಂತ್ರಿ ನರೇಂದ್ರ ಮೋದಿಯವರು 74ನೇ ಜನ್ಮದಿನಾಚರಣೆಯ ಸಂಭ್ರಮದಲ್ಲಿದ್ದು, ಈ ಹಿನ್ನೆಲೆಯಲ್ಲಿ ಗಣ್ಯರು ಹಾಗೂ ಬಿಜೆಪಿ ನಾಯಕರು ಶುಭಾಶಯಗಳನ್ನು ಕೋರಿದ್ದಾರೆ.

ರಾಜ್ಯ ಬಿಜೆಪಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಜಗಮೆಚ್ಚಿದ ಜನನಾಯಕ, ಭಾರತ ಕಂಡ ಹೆಮ್ಮೆಯ ಪ್ರಧಾನಿ, ದಕ್ಷ ಆಡಳಿತ, ಸಮರ್ಥ ನಾಯಕತ್ವ, ಸ್ಪಂದನಶೀಲ ಪ್ರಧಾನಿಯಾಗಿ ಜಗತ್ತೇ ಮೆಚ್ಚಿದ ವಿಶ್ವನಾಯಕನಾಗಿ, ದಣಿವರಿಯದೆ ದೇಶದ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ನಮ್ಮೆಲ್ಲರ ನೆಚ್ಚಿನ ಪ್ರಧಾನಿ ಮೋದಿಯವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು ಎಂದು ಹೇಳಿ, ಕೊಂಡಾಡಿದೆ.

ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ

ಆದರಣೀಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು. ಇನ್ನೂ ಸುದೀರ್ಘ ಕಾಲ ತಮ್ಮ ಸಾರ್ಥಕ ದೇಶಸೇವೆ ನಡೆಯುತ್ತಿರುವಂತೆ ದೇವರ ಆಶೀರ್ವಾದವಿರಲಿ ಎಂದು ಹಾರೈಸುತ್ತೇನೆಂದು ತಿಳಿಸಿದ್ದಾರೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ.ನಡ್ಡಾ

ರಾಷ್ಟ್ರದ ಸೇವೆ ಮತ್ತು ಜನರ ಉನ್ನತಿಗಾಗಿ ಪ್ರತಿ ಕ್ಷಣವನ್ನೂ ‘ಅಂತ್ಯೋದಯ’ ಮಂತ್ರವನ್ನು ಸಾಕ್ಷಾತ್ಕರಿಸಲು ಮೀಸಲಿಟ್ಟ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಶುಭಾಶಯಗಳು. ನಿಮ್ಮ ಜನ್ಮದಿನದಂದು ಹೃತ್ಪೂರ್ವಕವಾಗಿ ಅಭಿನಂದನೆ ತಿಳಿಸುತ್ತೇನೆ. ನಿಮ್ಮ ನಾಯಕತ್ವದಲ್ಲಿ, ನಮ್ಮ ಗುರಿ, ಸೇವೆ, ಉತ್ತಮ ಆಡಳಿತ ಮತ್ತು ಅಭಿವೃದ್ಧಿಯು ನಿಜವಾಗುತ್ತಿದೆ ಎಂದಿದ್ದಾರೆ.

ಅಮಿತ್ ಶಾ  ಪೋಸ್ಟ್
ಮೋದಿಯವರು ಪರಂಪರೆಯಿಂದ ವಿಜ್ಞಾನದವರೆಗೆ ಎಲ್ಲವನ್ನೂ ‘ನವ ಭಾರತ’ದ ದೃಷ್ಟಿಯೊಂದಿಗೆ ಜೋಡಿಸಿದ್ದಾರೆ. ತಮ್ಮ ಇಚ್ಛಾಶಕ್ತಿ ಮತ್ತು ಜನಕಲ್ಯಾಣದ ಸಂಕಲ್ಪ ಅಸಾಧ್ಯವೆಂದು ತೋರುವ ಅನೇಕ ಕಾರ್ಯಗಳನ್ನು ಸಾಧ್ಯವಾಗಿಸುವ ಮೂಲಕ ಬಡವರ ಕಲ್ಯಾಣಕ್ಕಾಗಿ ಹೊಸ ದಾಖಲೆಗಳನ್ನು ಸೃಷ್ಟಿಸಿದ್ದಾರೆ. ದೇಶವು ಭದ್ರತೆಗಾಗಿ ದುಡಿದ, ಹಿಂದುಳಿದವರ ಬದುಕಿನಲ್ಲಿ ಬದಲಾವಣೆ ತಂದು ಅವರನ್ನು ಮುಖ್ಯವಾಹಿನಿಗೆ ತಂದ ನಿರ್ಣಾಯಕ ನಾಯಕನನ್ನು ಮೋದಿ ರೂಪದಲ್ಲಿ ದೇಶ ಪಡೆದಿದೆ ಎಂದಿದ್ದಾರೆ.

- Advertisement - Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!