ಚುನಾವಣಾ ದಿನಾಂಕ ಘೋಷಣೆ ಬೆನ್ನಲ್ಲೇ ಟ್ವೀಟ್ ಮಾಡಿ ಜನಾಶೀರ್ವಾದ ಬಯಸಿದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ವಿಧಾನಸಭಾ (Vidhana Sabha) ಕ್ಷೇತ್ರಗಳಿಗೆ ಚುನಾವಣಾ ದಿನಾಂಕವನ್ನು (Election Date) ಘೋಷಣೆಯಾಗಿದ್ದು,ಈ ವಿಷಯ ಹೊರ ಬೀಳುತ್ತಿದಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡುವ ಮೂಲಕ ಕರ್ನಾಟಕ ಜನತೆಯ ಆರ್ಶೀವಾದ ಬಯಸಿದ್ದಾರೆ.

ಕನ್ನಡದಲ್ಲಿ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ಕರ್ನಾಟಕ ಅಭಿವೃದ್ಧಿಯ ಶಕ್ತಿಕೇಂದ್ರ ಕಷ್ಟಪಟ್ಟು ದುಡಿಯುವ ರಾಜ್ಯದ ಜನರಿಗೆ ಧನ್ಯವಾದಗಳು. ಕರ್ನಾಟಕದ ಬೆಳವಣಿಗೆಯ ಪಯಣವನ್ನು ವೇಗಗೊಳಿಸಲು ಹಾಗೂ ಬಡವರನ್ನು, ಸಮಾಜದಲ್ಲಿ ಮೂಲೆಗುಂಪಾದವರನ್ನು ದಮನಿತರನ್ನು ಸಶಕ್ತಗೊಳಿಸಲು ಬಿಜೆಪಿ ಬದ್ಧವಾಗಿದೆ. ನಾವು ನಮ್ಮ ಅಭಿವೃದ್ಧಿಯ ಕಾರ್ಯಸೂಚಿಯನ್ನು ಆಧರಿಸಿ ಜನಾಶೀರ್ವಾದವನ್ನು ಬಯಸುತ್ತೇವೆ ಎಂದು ಬರೆದುಕೊಂಡಿದ್ದಾರೆ.

ರಾಜ್ಯ ಬಿಜೆಪಿ ಘಟಕ ಕೂಡ ಟ್ವೀಟ್​ ಮಾಡಿದ್ದು, ರಾಜ್ಯದಲ್ಲಿ ಕಮಲ ಅರಳುವ ದಿನಾಂಕ ನಿಶ್ಚಯವಾಗಿದೆ. ಸ್ಪಷ್ಟ ಬಹುಮತದೊಂದಿಗೆ ಆಶೀರ್ವಾದ ಮಾಡಲು ಕನ್ನಡಿಗರು ಉತ್ಸುಕರಾಗಿದ್ದಾರೆ. ಪಕ್ಷವನ್ನು ಅಧಿಕಾರಕ್ಕೆ ತರಲು ಇಂದಿನಿಂದ ಹಗಲಿರುಳು ಶ್ರಮಿಸಲು ಕಾರ್ಯಕರ್ತರ ಪಡೆ ಸಜ್ಜಾಗಿದೆ. ಕರ್ನಾಟಕ ಗೆಲ್ಲಲಿದೆ ಎಂದು ಬರೆಯಲಾಗಿದೆ.

ಮೇ 10ರ ಬುಧವಾರದಂದು 224 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು ಮೇ 13ರ ಶನಿವಾರದಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!