ಕಲ್ಯಾಣ ಕರ್ನಾಟಕ ಭಾಗದ 2 ಜಿಲ್ಲೆಗಳಿಗೆ ಪ್ರಧಾನಿ ಮೋದಿ ಭೇಟಿ: ಊರೆಲ್ಲಾ ಕೇಸರಿಮಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಚುನಾವಣಾ ಪರ್ವ ಆರಂಭವಾಗಿದ್ದು, ಇದೀಗ ಪ್ರಧಾನಿ ನರೇಂದ್ರ ಮೋದಿ ಕಲಬುರಗಿಗೆ ಭೇಟಿ ನೀಡುತ್ತಿದ್ದಾರೆ.

ಬರೋಬ್ಬರಿ ನಾಲ್ಕು ವರ್ಷಗಳ ನಂತರ ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕಲಬುರಗಿಗೆ ಪ್ರಧಾನಿ ಮೋದಿ ಭೇಟಿ ನೀಡುತ್ತಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಬೆಂಗಳೂರು, ಹುಬ್ಬಳ್ಳಿ ಹಾಗೂ ಮೈಸೂರಿಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ. ಈ ಬಾರಿ ಯಾದಗಿರಿ ಹಾಗೂ ಕಲಬುರಗಿಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ.

ಪ್ರಧಾನಿ ಮೋದಿ ಆಗಮನದಿಂದ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದ್ದು, ಎರಡೂ ಜಿಲ್ಲೆಗಳು ಕೇಸರಿಮಯವಾಗಿವೆ. ಇಡೀ ಊರಿನ ತುಂಬ ಕೇಸರಿ ಧ್ವಜಗಳು, ಪ್ರಧಾನಿ ಮೋದಿ ಬ್ಯಾನರ್‌ಗಳು, ಕಟೌಟ್‌ಳಿ ಹಾಗೂ ನಾಯಕರ ಫೋಟೊಗಳು ಎಲ್ಲೆಡೆ ರಾರಾಜಿಸುತ್ತಿವೆ.

ಪ್ರಧಾನಿ ಮೋದಿ ಆಗಮನ ಹಿನ್ನೆಲೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಕಲಬುರಗಿಯ ಸೇಡಂನಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ತಂಡಾಗಳನ್ನು ಕಂದಾಯ ಗ್ರಾಮವನ್ನಾಗಿ ಘೋಷಿಸಿ ಹಕ್ಕುಪತ್ರ ವಿತರಿಸಲಾಗುವುದು. ಮಧ್ಯಾಹ್ನ ಜಲ್ ಜೀವನ್ ಮಿಷನ್ ಅಡಿಯಲ್ಲಿ ಯಾದಗಿರಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಮತ್ತು ಸರತ್ ಚೆನ್ನೈ ಎಕ್ಸ್‌ಪ್ರೆಸ್‌ವೇ ಪ್ಯಾಕೇಜ್ ೩ನೇ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!