Thursday, December 25, 2025

ದೆಹಲಿಯ ಚರ್ಚ್‌ಗೆ ಭೇಟಿ ನೀಡಿ ಪ್ರಾರ್ಥಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕ್ರಿಸ್ಮಸ್‌ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಮುಂಜಾನೆ ದೆಹಲಿಯ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌ ಭೇಟಿ ನೀಡಿ ಪ್ರಾರ್ಥನೆ ಮಾಡಿದರು.

ದೆಹಲಿಯ ಬಿಷಪ್ ರೆವರೆಂಡ್ ಡಾ. ಪಾಲ್ ಸ್ವರೂಪ್ ಅವರು ಈ ಸಂದರ್ಭದಲ್ಲಿ ವಿಶೇಷ ಪ್ರಾರ್ಥನೆ ಮಾಡಿದರು. ಮೋದಿ ಭೇಟಿಯ ಸಂದರ್ಭದಲ್ಲಿ ದೆಹಲಿಯ ದೆಹಲಿ ಮತ್ತು ಉತ್ತರ ಭಾರತದ ಹಲವು ಕ್ರಿಶ್ಚಿಯನ್‌ ಬಾಂಧವರು ಭಾಗಿಯಾಗಿದ್ದರು.

ಭೇಟಿಯ ನಂತರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಮೋದಿ, ದೆಹಲಿಯ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌ನಲ್ಲಿ ಕ್ರಿಸ್‌ಮಸ್ ಬೆಳಗಿನ ಸೇವೆಯಲ್ಲಿ ಭಾಗವಹಿಸಿದ್ದೆ. ಈ ಸೇವೆಯು ಪ್ರೀತಿ, ಶಾಂತಿ ಮತ್ತು ಕರುಣೆಯ ಅಕಾಲಿಕ ಸಂದೇಶವನ್ನು ಪ್ರತಿಬಿಂಬಿಸುತ್ತದೆ. ಕ್ರಿಸ್‌ಮಸ್‌ನ ಚೈತನ್ಯವು ನಮ್ಮ ಸಮಾಜದಲ್ಲಿ ಸಾಮರಸ್ಯ ಮತ್ತು ಸದ್ಭಾವನೆಯನ್ನು ಪ್ರೇರೇಪಿಸಲಿ ಎಂದು ಬರೆದುಕೊಂಡಿದ್ದಾರೆ. 

error: Content is protected !!