ವಿಮಾನದಲ್ಲಿಯೇ ಕುಳಿತು ಅಯೋಧ್ಯೆ ರಘುರಾಮನ ಸೂರ್ಯ “ತಿಲಕ” ಅಭಿಷೇಕ ವೀಕ್ಷಿಸಿದ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ರಘುರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ ಕಾರ್ಯಕ್ರಮವನ್ನು ವಿಮಾನದಲ್ಲಿಯೇ ಕುಳಿತು ವೀಕ್ಷಣೆ ಮಾಡಿದರು. ಸೂರ್ಯ ತಿಲಕ ರಾಮನ ಹಣೆಯ ಮೇಲೆ ಮೂಡುತ್ತಿದ್ದಂತೆ ಕೈಮುಗಿದು ನಮಸ್ಕರಿಸಿದ ಫೋಟೋವನ್ನು ಕೂಡ ಅವರು ಹಂಚಿಕೊಂಡಿದ್ದಾರೆ.

ಸಮಾವೇಶದ ನಂತರ ನಾನು ಪ್ರಭು ರಾಮನ ಹಣೆ ಮೇಲೆ ಸೂರ್ಯ ತಿಲಕವನ್ನು ವೀಕ್ಷಿಸಿದೆ. ಲಕ್ಷಾಂತರ ಭಾರತೀಯರಂತೆ ನನಗೂ ಇದು ಅತ್ಯಂತ ಭಾವನಾತ್ಮಕ ಕ್ಷಣ. ಅಯೋಧ್ಯೆಯ ರಾಮನವಮಿ ಐತಿಹಾಸಿಕ ಮಹತ್ವ ಹೊಂದಿದೆ. ಈ ಸೂರ್ಯ ತಿಲಕ ನಮ್ಮ ಜೀವನಕ್ಕೆ ಬಲವನ್ನು ಸೇರಿಸಲಿ ಮತ್ತು ನಮ್ಮ ರಾಷ್ಟ್ರವು ವೈಭವದ ಹೊಸ ಎತ್ತರಗಳನ್ನು ಏರಲು ಪ್ರೇರೇಪಿಸಲಿ ಎಂದು ಮೋದಿ ಅವರು ಬರೆದುಕೊಂಡಿದ್ದಾರೆ.

ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ ಹೊಸ ವಾತಾವರಣವಿದ್ದು, 500 ವರ್ಷಗಳ ನಂತರ ಶ್ರೀರಾಮನ ಜನ್ಮದಿನ ಬಂದಿದ್ದು, ತನ್ನ ಮನೆಯಲ್ಲಿಯೇ ಜನ್ಮದಿನ ಆಚರಿಸುವ ಸೌಭಾಗ್ಯವನ್ನು ಪಡೆದಿದ್ದಾರೆ. ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!