ಹೊಸದಿಗಂತ ಡಿಜಿಟಲ್ ಡೆಸ್ಕ್:
ಥಾಯ್ಲೆಂಡ್‌ಗೆ ತೆರಳಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬ್ಯಾಕಾಂಕ್ಗೆ ಬಂದಿಳಿದ್ದು, ಈ ವೇಳೆ ಪ್ರೈಮ್ ಮಿನಿಸ್ಟರ್ ಬ್ಯಾಕಾಂಕ್ ಜನತೆ ಜಯಗೋಘದೊಂದಿಗೆ ಭರ್ಜರಿ ಸ್ವಾಗತ ಕೋರಿದ್ದಾರೆ.
ಈ ವೇಳೆ ಪ್ರಧಾನಿ ಮತ್ತೊಂದು ವಿಶೇಷ ಘಟನೆ ನಡೆದಿದ್ದು, ಮೋದಿ ಥಾಯ್ ರಾಮಾಯಣವನ್ನು ವೀಕ್ಷಿಸಿದ್ದಾರೆ.
ಬ್ಯಾಂಕಾಕ್ ನೆಲದಲ್ಲಿ ಪ್ರಧಾನಿ ಮೋದಿ ಥಾಯ್ ರಾಮಾಯಣ ಹಾಗೂ ಗರ್ಭಾ ನೃತ್ಯವನ್ನು ವೀಕ್ಷಿಸಿದ್ದು, ಭಾರತ ಮತ್ತು ಥೈಲ್ಯಾಂಡ್ ನಡುವಿನ ಆಳವಾದ ಸಾಂಸ್ಕೃತಿಕ ಸಂಬಂಧಗಳನ್ನು ಸಂಕೇತಿಸುವ ರಾಮಾಯಣದ ಥಾಯ್ ಆವೃತ್ತಿ ‘ರಾಮಕಿಯೆನ್’ ಅನ್ನು ವೀಕ್ಷಿಸಿದ್ದಾರೆ.
ಈ ಪ್ರವಾಸದ ಬಗ್ಗೆ ತಮ್ಮ ಅಧಿಕೃತ ವೆಬ್‌ಸೈಟ್‌ನಲ್ಲಿ ಬರೆದು ಕೊಂಡಿದ್ದು, ‘ಬಿಮ್‌ಸ್ಟೆಕ್ ದೇಶಗಳ ನಾಯಕರನ್ನು ಭೇಟಿ ಮಾಡಲು ಮತ್ತು ಭಾರತೀಯರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ನಮ್ಮ ಸಹಯೋಗವನ್ನು ಮತ್ತಷ್ಟು ಬಲಪಡಿಸಲು ಈ ಭೇಟಿ ಫಲಪ್ರದವಾಗುತ್ತದೆ ಎಂದು ನಾನು ಭಾವಿಸುತ್ತೇನೆ’ ಎಂದಿದ್ದಾರೆ.
ಥಾಯ್ಲೆಂಡ್ ಪ್ರವಾಸದ ಬಳಿಕ ಪ್ರಧಾನಿ ಮೋದಿಯವರು ಎರಡು ದಿನಗಳ ಶ್ರೀಲಂಕಾ ಪ್ರವಾಸವನ್ನು ಕೈಗೊಳ್ಳಲಿದ್ದಾರೆ. ಏಪ್ರಿಲ್ 4ರಿಂದ 6ರವರೆಗೆ ಅವರು ಶ್ರೀಲಂಕಾ ಪ್ರವಾಸದಲ್ಲಿ ಇರಲಿದ್ದಾರೆ.