Friday, March 1, 2024

ಜ.19ರಂದು ವಿಶೇಷ ವಿಮಾನದಲ್ಲಿ ಕಲಬುರಗಿಗೆ ಆಗಮಿಸಲಿದ್ದಾರೆ ಪ್ರಧಾನಿ ಮೋದಿ

ಹೊಸದಿಗಂತ ವರದಿ ಕಲಬುರಗಿ: 

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಾತ್ಕಲಿಕ ಪ್ರವಾಸ ಪಟ್ಟಿಯಂತೆ ಇದೇ ಜನವರಿ 19 ರಂದು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಳಿಗ್ಗೆ 9.35 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.

ಬೆಳಿಗ್ಗೆ 9.40 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಮಹಾರಾಷ್ಟ್ರದ ಸೋಲಾಪುರಕ್ಕೆ ಪ್ರಯಾಣಿಸಿ ಅಲ್ಲಿ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮರಳಿ ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ 1 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.

ನಂತರ ಮಧ್ಯಾಹ್ನ 1 ಗಂಟೆ 5 ನಿಮಿಷಕ್ಕೆ ಕಲಬುರಗಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!