ಹೊಸದಿಗಂತ ಡಿಜಿಟಲ್ ಡೆಸ್ಕ್:
ಜವಾಹರಲಾಲ್ ನೆಹರು ಅವರ ದಾಖಲೆಯನ್ನು ಮುರಿದು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ ಮೋದಿ ನಾಳೆ ಸ್ವಾತಂತ್ರ್ಯ ದಿನಾಚರಣೆಯಂದು ಹೊಸ ದಾಖಲೆ ಬರೆಯಲಿದ್ದಾರೆ.
78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೆಹಲಿಯ ಕೆಂಪುಕೋಟೆಯಿಂದ ಸಾರ್ವಜನಿಕರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿ ನಂತರ ಪ್ರಧಾನಿ ಮೋದಿ ಅವರು ಕೆಂಪು ಕೋಟೆಯಿಂದ ಸತತ 11 ನೇ ಸ್ವಾತಂತ್ರ್ಯ ದಿನದ ಭಾಷಣ ಮಾಡುವ ಮೂರನೇ ಪ್ರಧಾನಿಯಾಗಲಿದ್ದಾರೆ.
ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಅವರ ಮೊದಲ ಭಾಷಣ ಇದಾಗಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸತತ ಹತ್ತು ಸ್ವಾತಂತ್ರ್ಯ ದಿನದ ಭಾಷಣಗಳನ್ನು ಮಾಡಿದ್ದರು.