ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ಆ.28 ರಂದು ಹೊಸದಾಗಿ ಸೇರ್ಪಡೆಗೊಂಡವರಿಗೆ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರ ವಿತರಿಸಲಿದ್ದಾರೆ ಎಂದು ಅಧಿಕೃತ ಹೇಳಿಕೆ ಶನಿವಾರ ತಿಳಿಸಿದೆ.
ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಆ.28 ರಂದು ಪಂಜಾಬ್ ನಲ್ಲಿ ನೇಮಕಾತಿ ಪತ್ರ ವಿತರಿಸಲಿದ್ದಾರೆ ಎಂದು ಗಡಿ ಭದ್ರತಾ ಪಡೆ ತಿಳಿಸಿದೆ.
ಆ.28ರಂದು ಜಲಂಧರ್ನ ಬಿಎಸ್‌ಎಫ್ ಪಂಜಾಬ್ ಸೇರಿದಂತೆ 45 ರೋಜ್ಗಾರ್ ಮೇಳದಲ್ಲಿ ಭಾರತ ಸರ್ಕಾರದ ಹರ್ದೀಪ್ ಸಿಂಗ್ ಪುರಿ ಉಪಸ್ಥಿತಿಯಲ್ಲಿ ನಡೆಯಲಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮ ಉದ್ದೇಶಿಸಿ ಆನ್ ಲೈನ್ ನಲ್ಲಿ ಮಾತನಾಡಲಿದ್ದಾರೆ.