ಹೊಸದಿಗಂತ ಡಿಜಿಟಲ್ ಡೆಸ್ಕ್:
ಫೆ.12ರಂದು ಪ್ರಧಾನಿ ಮೋದಿ ಅವರು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಿಗೆ ಆಯ್ಕೆಯಾಗಿರುವ 1 ಲಕ್ಷಕ್ಕೂ ಹೆಚ್ಚು ಮಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ.
ಈ ವೇಳೆ ನಿರ್ಮಾಣವಾಗಲಿರುವ ‘ಕರ್ಮಯೋಗಿ ಭವನ’ದ ಮೊದಲನೇ ಹಂತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ ತಿಳಿಸಿದೆ.
ದೇಶದಾದ್ಯಂತ 47 ಕಡೆಗಳಲ್ಲಿ ಉದ್ಯೋಗ ಮೇಳ ನಡೆಯಲಿದೆ. ಕಂದಾಯ, ಗೃಹ ವ್ಯವಹಾರ, ಉನ್ನತ ಶಿಕ್ಷಣ, ಪ್ರಾಥಮಿಕ ಶಿಕ್ಷಣ. ರಕ್ಷಣೆ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳಿಗೆ ಆಯ್ಕೆಯಾದವರು ಇದರಲ್ಲಿ ಸೇರಿದ್ದಾರೆ .
ಉದ್ಯೋಗ ಮೇಳವು ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆಯನ್ನು ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ ಎಂದು ಹೇಳಿದೆ.