ಅಹಮದಾಬಾದ್ ನಲ್ಲಿ ಇಂದು ಬೃಹತ್ ರೋಡ್ ಶೋ ನಡೆಸಲಿದ್ದಾರೆ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುಜರಾತ್ ವಿಧಾನಸಭಾ ಚುನಾವಣೆಯ ಮೊದಲನೆ ಹಂತದ ಮತದಾನ ನಿನ್ನೆಯಷ್ಟೇ ಮುಗಿದಿದ್ದು, ಎರಡನೇ ಹಂತದ ಮತದಾನ ಡಿ.5 ರಂದು ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಇಂದು ಅಹಮದಾಬಾದ್‌ನಲ್ಲಿ ಕನಿಷ್ಠ 13 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡ ಬೃಹತ್ ರೋಡ್‌ಶೋ ನಡೆಸಲಿದ್ದಾರೆ.

ನರೋಡಾ ಅಸೆಂಬ್ಲಿ ಕ್ಷೇತ್ರದಿಂದ ರ‍್ಯಾಲಿ ಆರಂಭವಾಗಲಿದೆ. ರಸ್ತೆ ಮಾರ್ಗವಾಗಿ ಪ್ರಧಾನಿ ಮೋದಿ ಭೇಟಿ ನೀಡಲಿರುವ 35 ಸ್ಥಳಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಮಧ್ಯಾಹ್ನ 3 ಗಂಟೆಯಿಂದ ರೋಡ್‌ಶೋ ಆರಂಭವಾಗಿ ಸಂಜೆ 6:30ಕ್ಕೆ ಕೊನೆಗೊಳ್ಳಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!