Saturday, December 9, 2023

Latest Posts

ಇಂದು ನಮ್ಮ ಮೆಟ್ರೋ ವಿಸ್ತೃತ ಮಾರ್ಗ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:‌

ನಮ್ಮ ಮೆಟ್ರೋ ವಿಸ್ತೃತ ಮಾರ್ಗವನ್ನು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ.

ಈಗಾಗಲೆ ಸಂಚಾರ ನಡೆಸುತ್ತಿರುವ ಕೆ.ಆರ್.ಪುರಂ- ಬೈಯಪ್ಪನಹಳ್ಳಿ ಮತ್ತು ಕೆಂಗೇರಿ- ಚಲ್ಲಘಟ್ಟ ನಡುವಿನ ಮಾರ್ಗಗಳ ಮೆಟ್ರೋ ಸೇವೆಯನ್ನು ಪ್ರಧಾನಿ ಮಂತ್ರಿಗಳು ಇಂದು ಮಧ್ಯಾಹ್ನ 12 ಗಂಟೆಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಉದ್ಘಾಟನೆ ಮಾಡಲಿದ್ದಾರೆ.

ನಮ್ಮ ಮೆಟ್ರೋ ವಿಸ್ತೃತ ಮಾರ್ಗಗಳ ಸೇವೆಯು ಪ್ರಯಾಣಿಕರ ಒತ್ತಾಯದ ಮೇರೆಗೆ ಸಂಚಾರ ಆರಂಭಿಸಿತ್ತು. ಆದರೆ ಅಧಿಕೃತವಾಗಿ ಇದೀಗ ಪ್ರಧಾನಿ ಮೋದಿಯವರು ವರ್ಚುಯಲ್‌ ಮೂಲಕ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಕೂಡ ಭಾಗಿಯಾಗಲಿದ್ದಾರೆ.

ನಮ್ಮ ಮೆಟ್ರೋ ವಿಸ್ತೃತ ನೇರಳೆ ಮಾರ್ಗ ಚಲ್ಲಘಟ್ಟದಿಂದ ವೈಟ್‌ಫೀಲ್ಡ್‌ವರೆಗೆ ವಿಸ್ತರಿತಗೊಂಡಿದ್ದು, ಐಟಿ ಉದ್ಯೋಗಿಗಳಿಗೆ, ವಿದ್ಯಾರ್ಥಿಗಳಿಗೆ ಹೆಚ್ಚು ಪ್ರಯೋಜನವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!