ಇಂದು ‘ಬಾರಿಸು ಕನ್ನಡ ಡಿಂಡಿಮವ’ ಉತ್ಸವ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ, ಹೇಗಿರಲಿದೆ ಕಾರ್ಯಕ್ರಮ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಯಲ್ಲಿ ಬಾರಿಸು ಕನ್ನಡ ಡಿಂಡಿಮವ ಉತ್ಸವವನ್ನು ಉದ್ಘಾಟಿಸಲಿದ್ದಾರೆ.

ದೆಹಲಿ ಕರ್ನಾಟಕ ಸಂಘದ 75ನೇ ವಾರ್ಷಿಕೋತ್ಸವದ ಅಂಗವಾಗಿ ಎರಡು ದಿನಗಳು ಕಾಲ ಉತ್ಸವ ನಡೆಲಿದೆ. ಪ್ರಧಾನಿ ಮೋದಿ ಅವರ ಆಶಯದ ಏಕ ಭಾರತ ಶ್ರೇಷ್ಠ ಭಾರತಕ್ಕೆ ಅನುಗುಣವಾಗಿ ಕಾರ್ಯಕ್ರಮ ನಡೆಯಲಿದೆ.

ಕರ್ನಾಟಕದ ಸಂಸ್ಕೃತಿ, ಸಂಪ್ರದಾಯ ಹಾಗೂ ಇತಿಹಾಸವನ್ನು ಕೊಂಡಾಡುವ ಉತ್ಸವ ಇದಾಗಿರಲಿದೆ. ಆಜಾದಿ ಕಾ ಅಮೃತ ಮಹೋತ್ಸವದ ಆಶ್ರಯದಲ್ಲಿ ನಡೆಯುತ್ತಿರುವ ಈ ಉತ್ಸವದ ಎರಡು ದಿನಗಳ ಈ ಆಚರಣೆಯಲ್ಲಿ ಸಾಂಪ್ರದಾಯಿಕ ನೃತ್ಯ, ಸಂಗೀತ, ಕವನ ವಾಚನ ನಡೆಯಲಿದೆ. ಸಾಂಸ್ಕೃತಿ ಕಾರ್ಯಕ್ರಮಗಳಿಗಾಗಿ ರಾಜ್ಯದ ಎಲ್ಲ ಜಿಲ್ಲೆಗಳಿಂದ ಸಾವಿರಕ್ಕೂ ಹೆಚ್ಚು ಕಲಾವಿದರನ್ನು ಆಹ್ವಾನಿಸಲಾಗಿದೆ.

ಕಾರ್ಯಕ್ರಮದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ. ಕಿಶನ್ ರೆಡ್ಡಿ, ಸಿಎಂ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಮಹಾಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ, ಶ್ರೀ ಸ್ಫಟಿಕಪುರ ನಂಜಾವಧೂತ ಸ್ವಾಮೀಜಿ, ಶ್ರೀ ಪೇಜಾವರ ಮಠದ ವಿಶ್ವಪ್ರಸದ್ದ ತೀರ್ಥ ಸ್ವಾಮೀಜಿ, ಡಾ. ವೀರೇಂದ್ರ ಹೆಗ್ಗಡೆ, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಿ.ಟಿ ರವಿ ಹಾಗೂ ಇತರ ಗಣ್ಯರು ಉಪಸ್ಥಿತರಿರಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!