ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂಡಮಾನ್ ಮತ್ತು ನಿಕೋಬಾರ್‌ನ ಪ್ರಾಚೀನ ದ್ವೀಪಗಳಿಗೆ ದ್ವಾರದಂತೆ, ಪೋರ್ಟ್ ಬ್ಲೇರ್ ಪ್ರವಾಸಿಗರಿಗೆ ಜನಪ್ರಿಯ ತಾಣವಾಗಿದೆ. ಪೋರ್ಟ್ ಬ್ಲೇರ್‌ನಲ್ಲಿ ವೀರ್ ಸಾವರ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಅನ್ನು ನಾಳೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ.
ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಮಂತ್ರಿ ಮೋದಿ ಉದ್ಘಾಟಿಸಲಿದ್ದಾರೆ.ನೂತನ ಏಕೀಕೃತ ಟರ್ಮಿನಲ್ ಕಟ್ಟಡವು ವಾರ್ಷಿಕ ಸುಮಾರು 50 ಲಕ್ಷ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿದೆ.
ಸುಮಾರು 710 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡ ನಿರ್ಮಾಣ ಮಾಡಲಾಗಿದೆ. ಈ ವಿಮಾನ ನಿಲ್ದಾಣ ದ್ವೀಪ ಕೇಂದ್ರಾಡಳಿತ ಪ್ರದೇಶಕ್ಕೆ ಸಂಪರ್ಕವನ್ನು ವೃದ್ಧಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಒಟ್ಟು ಸುಮಾರು 40,800 ಚದರ ಮೀಟರ್‌ನ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ, ಹೊಸ ಟರ್ಮಿನಲ್ ಕಟ್ಟಡವು ವಾರ್ಷಿಕ ಸುಮಾರು 50 ಲಕ್ಷ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿದೆ. ಪೋರ್ಟ್ ಬ್ಲೇರ್ ವಿಮಾನ ನಿಲ್ದಾಣದಲ್ಲಿ 80 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ಬೋಯಿಂಗ್-767-400 ಮತ್ತು ಎರಡು ಏರ್‌ಬಸ್-321 ಮಾದರಿಯ ವಿಮಾನಗಳಿಗೆ ಸೂಕ್ತವಾದ ಅಪ್ರಾನ್ ಸಹ ನಿರ್ಮಿಸಲಾಗಿದೆ. ಇದರಿಂದಾಗಿ ಪ್ರಸ್ತುತ ಏಕಕಾಲದಲ್ಲಿ ಹತ್ತು ವಿಮಾನಗಳ ನಿಲುಗಡೆಗೆ ವಿಮಾನ ನಿಲ್ದಾಣವು ಸಿದ್ಧವಾಗಿದೆ.
ವಿಮಾನ ನಿಲ್ದಾಣದ ಟರ್ಮಿನಲ್‌ನ ವಾಸ್ತುಶಿಲ್ಪ ವಿನ್ಯಾಸವು ಚಿಪ್ಪಿನ ಆಕಾರದ ರಚನೆಯನ್ನು ಹೊಂದಿದೆ.ಇದು ಸಮುದ್ರ ಮತ್ತು ದ್ವೀಪಗಳನ್ನು ಬಿಂಬಿಸುತ್ತದೆ. ಶಾಖ ಹೀರಿಕೊಳ್ಳುವಿಕೆಯನ್ನು ತಗ್ಗಿಸಲು ಡಬಲ್ ಇನ್ಸುಲೇಟೆಡ್ ರೂಫಿಂಗ್ ಸಿಸ್ಟಮ್, ಕಟ್ಟಡದ ಒಳಗೆ ಕೃತಕ ಬೆಳಕಿನ ಅವಶ್ಯಕತೆಯನ್ನು ತಗ್ಗಿಸಲು ಹಗಲಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೈಸರ್ಗಿಕ ಸೂರ್ಯನ ಬೆಳಕಿನ ಗರಿಷ್ಠ ಒಳಹರಿವಿಗೆ ಸ್ಕೈಲೈಟ್‌ಗಳು, ಎಲ್ಇಡಿ ಲೈಟಿಂಗ್, ಶಾಖ ತಗ್ಗಿಸುವ ಗೇನ್ ಗ್ಲೇಜಿಂಗ್ ಮುಂತಾದ ಹಲವಾರು ಸಮರ್ಥನೀಯ ವೈಶಿಷ್ಟ್ಯಗಳನ್ನು ಹೊಸ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡವು ಹೊಂದಿದೆ.
The new integrated terminal building at Veer Savarkar International Airport, Port Blair, will ensure easier travel to Andaman and Nicobar islands. This will be a big boost for tourism in particular. The building will be inaugurated tomorrow, 18th July, at 10:30 AM. https://t.co/iGP2ZLJxYl pic.twitter.com/i2QK2rwArO
— Narendra Modi (@narendramodi) July 17, 2023
ಇಲ್ಲಿ ನಿರ್ಮಿಸಲಾದ ಭೂಮಿಯಡಿಯ ನೀರಿನ ತೊಟ್ಟಿಯಲ್ಲಿ ಮಳೆನೀರಿನ ಸಂಗ್ರಹಣೆ, 100% ಸಂಸ್ಕರಿಸಿದ ತ್ಯಾಜ್ಯನೀರಿನೊಂದಿಗೆ ಆನ್-ಸೈಟ್ ಕೊಳಚೆ ನೀರು ಸಂಸ್ಕರಣಾ ಘಟಕ ಮತ್ತು 500 ಕಿಲೊ ವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಸ್ಥಾವರವು ದ್ವೀಪಗಳ ಪರಿಸರದ ಮೇಲೆ ನಕಾರಾತ್ಮಕ ಪರಿಣಾಮ ಬೀರುವುದನ್ನು ತಗ್ಗಿಸುವುದನ್ನು ಖಾತ್ರಿಪಡಿಸುವುದು ಟರ್ಮಿನಲ್ ಕಟ್ಟಡದ ಕೆಲವು ವೈಶಿಷ್ಟ್ಯಗಳಾಗಿವೆ.