ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿ ಭಾಗದ ಕನಸು ಇನ್ನು ಕೆಲವೇ ಕ್ಷಣಗಳಲ್ಲಿ ನನಸಾಗಲಿದೆ!
ಪ್ರತಿಷ್ಟಿತ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಇಂದು (ಡಿ.30) ಮಂಗಳೂರು ಹಾಗೂ ಮಡಗಾಂವ್ ಮಧ್ಯೆ ಸಂಚರಿಸಲು ಮಂಗಲೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ರೆಡಿಯಾಗಿದೆ.
ಈಗಾಗಲೇ ಪ್ರಾಯೋಗಿಕ ಸಂಚಾರ ಪೂರ್ಣಗೊಂಡಿದ್ದು, ಮಂಗಳೂರು ಮಡಗಾಂವ್ ನಡುವೆ 320 ಕಿಮೀ ಓಡಾಟ ನಡೆಸಿದ ವೇಳೆ ಯಾವುದೇ ಸಮಸ್ಯೆಗಳು ಆಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ರೈಲಿಗೆ ಉಡುಪಿ ಮತ್ತು ಕಾರವಾರದಲ್ಲಿ ಮಾತ್ರ ನಿಲುಗಡೆಗಳು ಇರಲಿವೆ.
ಇಂದು ಪ್ರಧಾನಿ ನರೇಂದ್ರ ಮೋದಿ, ಮಂಗಳೂರು ಮಡಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್ ಸಹಿತ ಆರು ರೈಲುಗಳಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ