ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಜು.8ರಂದು ರಷ್ಯಾ ಪ್ರವಾಸ ಕೈಗೊಳ್ಳಲಿದ್ದಾರೆ. ಜುಲೈ 8ರಿಂದ 10ರವರೆಗೆ ನರೇಂದ್ರ ಮೋದಿ ಅವರು ರಷ್ಯಾ ಹಾಗೂ ಆಸ್ಟ್ರಿಯಾ ಪ್ರವಾಸ ಕೈಗೊಳ್ಳಲಿದ್ದಾರೆ. ಅದರಲ್ಲೂ, ಉಕ್ರೇನ್ ಹಾಗೂ ರಷ್ಯಾ ಯುದ್ಧದ ಬಳಿಕ ಇದೇ ಮೊದಲ ಬಾರಿಗೆ ಮೋದಿ ಅವರು ರಷ್ಯಾಗೆ ತೆರಳುತ್ತಿದ್ದಾರೆ.
ಜುಲೈ 10ರಂದು ನರೇಂದ್ರ ಮೋದಿ ಅವರು ಆಸ್ಟ್ರಿಯಾಗೆ ಭೇಟಿ ನೀಡಲಿದ್ದಾರೆ. ಕಳೆದ 41 ವರ್ಷಗಳಲ್ಲಿಯೇ ಆಸ್ಟ್ರಿಯಾಗೆ ಭೇಟಿ ನೀಡುತ್ತಿರುವ ಮೊದಲ ಪ್ರಧಾನಿ ಎನಿಸಿದ್ದಾರೆ.
ಜುಲೈ 8 ಹಾಗೂ 9ರಂದು ನರೇಂದ್ರ ಮೋದಿ ಅವರು ಮಾಸ್ಕೋದಲ್ಲಿ ಇರಲಿದ್ದು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಲಿದ್ದಾರೆ. ಇದೇ ವೇಳೆ ಭಾರತ-ರಷ್ಯಾ ನಡುವಿನ 22ನೇ ವಾರ್ಷಿಕ ಸಭೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಈ ಭೇಟಿ ಭಾರತ ಮತ್ತು ರಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಬಲಗೊಳಿಸಲಿದೆ. ಈ ಭೇಟಿ ವೇಳೆ ಉಭಯ ರಾಷ್ಟಗಳು ರಕ್ಷಣೆ, ಅನಿಲ ಮತ್ತು ಇತರೆ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.
ಪ್ರಧಾನಿ ಮೋದಿ ಇತ್ತೀಚೆಗೆ ಇಟಲಿಯಲ್ಲಿ ಆಯೋಜಿಸಿರುವ ಜಿ7 ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು. ಇದರ ಬಳಿಕ ರಷ್ಯಾ ಪ್ರವಾಸ ಮಹತ್ವ ಪಡೆದುಕೊಂಡಿದೆ.