ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾರ್ಚ್ 11 ರಂದು ಪವಿತ್ರ ಇಸ್ಲಾಮಿಕ್ ತಿಂಗಳ ರಂಜಾನ್ ಪ್ರಾರಂಭವಾಗಲಿದ್ದು, ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ.
“ಎಲ್ಲರಿಗೂ ರಂಜಾನ್ ಹಬ್ಬದ ಶುಭಾಶಯಗಳು. ಈ ಪವಿತ್ರ ಮಾಸವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ತರಲಿ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಪವಿತ್ರ ರಂಜಾನ್ ತಿಂಗಳ ಆರಂಭಿಸಲು ಚಂದ್ರನ ದರ್ಶನಕ್ಕಾಗಿ ಪ್ರಪಂಚದಾದ್ಯಂತದ ಮುಸ್ಲಿಮರು ಕಾತುರದಿಂದ ಕಾಯುತ್ತಿದ್ದರು. ಇದೀಗ ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ ಚಂದ್ರನ ದರ್ಶನವಾಗಿದ್ದು, ಭಾರತದ ವಿವಿಧ ಭಾಗಗಳಲ್ಲಿ ಚಂದ್ರನ ದರ್ಶನವಾಗಿದೆ. ಹೀಗಾಗಿ ಮಂಗಳವಾರದಿಂದ ಅಂದರೆ, ನಾಳೆಯಿಂದಲೇ ಮುಸ್ಲಿಂ ಸಮುದಾಯದವರು ಉಪವಾಸ ಆರಂಭಿಸಲಿದ್ದಾರೆ.