ದೇಶದ ಜನತೆಗೆ ದಸರಾ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ದಸರಾ ಹಬ್ಬದ ಶುಭಾಶಯ ಕೋರಿದ್ದಾರೆ.

ಟ್ವೀಟ್​ ಮೂಲಕ ಶುಭಾಶಯ ಕೋರಿದ ಅವರು, ಎಲ್ಲರಿಗೂ ಧೈರ್ಯ, ಸಂಯಮ ಮತ್ತು ಸಕಾರಾತ್ಮಕ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ .

‘ವಿಜಯದ ಸಂಕೇತವಾದ ವಿಜಯದಶಮಿಯಂದು ಎಲ್ಲಾ ದೇಶವಾಸಿಗಳಿಗೆ ಹಬ್ಬದ ಶುಭಾಶಯ. ಈ ಶುಭ ಸಂದರ್ಭವು ಪ್ರತಿಯೊಬ್ಬರ ಜೀವನದಲ್ಲಿ ಧೈರ್ಯ, ಸಂಯಮ ಮತ್ತು ಸಕಾರಾತ್ಮಕ ಶಕ್ತಿಯನ್ನು ತರಲಿ ಎಂದು ನಾನು ಆಶಿಸುತ್ತೇನೆ” ಎಂದು ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ.

ಇದಕ್ಕೂ ಮುನ್ನ, ರಾಷ್ಟ್ರಪತಿ ದ್ರೌಪದಿ ಮುರ್ಮು, ದಸರಾ ಮುನ್ನಾದಿನದ ಸಂದೇಶದಲ್ಲಿ’ವಿಜಯದಶಮಿಯ ಶುಭ ಸಂದರ್ಭದಲ್ಲಿ, ಎಲ್ಲಾ ನಾಗರಿಕರಿಗೆ ನನ್ನ ಹುತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತೇನೆ’ ಎಂದು ಹೇಳಿದ್ದಾರೆ.

ಪೂರ್ವ ಭಾರತದಲ್ಲಿ, ಈ ದಿನದಂದು ‘ದುರ್ಗಾ ವಿಗ್ರಹ ನಿಮಜ್ಜನ’ ಸಮಾರಂಭವನ್ನು ಉತ್ಸಾಹದಿಂದ ಆಚರಿಸಲಾಗುತ್ತದೆ. ಹೀಗಾಗಿ, ಈ ಹಬ್ಬವು ಭಾರತದ ಸಾಂಸ್ಕೃತಿಕ ಏಕತೆಗೆ ಉದಾಹರಣೆಯಾಗಿದೆ. ಈ ಹಬ್ಬವು ಶಾಶ್ವತ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ನಮಗೆ ಸ್ಫೂರ್ತಿ ನೀಡಲಿ ಎಂದು ನಾನು ಬಯಸುತ್ತೇನೆ. ನೈತಿಕತೆ, ಸತ್ಯ, ಒಳ್ಳೆಯ, ಶಾಂತಿ ಮತ್ತು ಸೌಹಾರ್ದತೆಯ ಜೀವನವನ್ನು ಎಲ್ಲರೂ ನಡೆಸಿ ಎಂದು ಅವರು ಸಲಹೆ ನೀಡಿದ್ದಾರೆ .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!