ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟಿ20 ವಿಶ್ವಕಪ್ನ ಸೂಪರ್ 8 ಪಂದ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಉಭಯ ತಂಡಗಳಿಗೆ ಶುಭ ಹಾರೈಸಿದ್ದಾರೆ.
ಇಂದು ಎರಡೂ ತಂಡಗಳು ಸೂಪರ್ 8 ರಲ್ಲಿ ತಮ್ಮ ಎರಡನೇ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಈ ಪಂದ್ಯ ಉಭಯ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದ್ದು, ಸೆಮಿಫೈನಲ್‌ಗೆ ತಲುಪಲು ಭಾರತ ಗೆಲುವಿನ ನಿರೀಕ್ಷೆಯಲ್ಲಿದ್ದರೆ, ಮತ್ತೊಂದೆಡೆ ಬಾಂಗ್ಲಾದೇಶಕ್ಕೆ ಟೂರ್ನಿಯಲ್ಲಿ ಉಳಿಯಲು ಗೆಲುವಿನ ಅಗತ್ಯವಿದೆ.
ಶುಭ ಹಾರೈಸಿದ ಪ್ರಧಾನಿ ಮೋದಿ
ಎರಡೂ ತಂಡಗಳನ್ನು ಅಭಿನಂದಿಸಿರುವ ಪ್ರಧಾನಿ ಮೋದಿ, ‘ಇಂದು ರಾತ್ರಿಯ ವಿಶ್ವಕಪ್ ಪಂದ್ಯಕ್ಕಾಗಿ ನಾನು ಎರಡೂ ತಂಡಗಳಿಗೆ ಶುಭ ಹಾರೈಸುತ್ತೇನೆ. ಬಾಂಗ್ಲಾದೇಶ ಭಾರತದ ಅತಿದೊಡ್ಡ ಅಭಿವೃದ್ಧಿ ಪಾಲುದಾರ ಮತ್ತು ನಾವು ಬಾಂಗ್ಲಾದೇಶದೊಂದಿಗಿನ ನಮ್ಮ ಸಂಬಂಧಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತೇವೆ’ ಎಂದು ಹೇಳಿದರು.