ಹೊಸದಿಗಂತ ಡಿಜಿಟಲ್ ಡೆಸ್ಕ್ :
ಫೆಬ್ರವರಿ 6 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಈ ವೇಳೆ ಬೆಂಗಳೂರು, ಗುಬ್ಬಿಯಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.
ಈ ಬಗ್ಗೆ ಪ್ರಧಾನಿ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಫೆಬ್ರವರಿ 6ರಂದು ದೆಹಲಿಯಿಂದ ಬೆಂಗಳೂರಿಗೆ ಬೆಳಿಗ್ಗೆ 10.55ಕ್ಕೆ ಆಗಮಿಸಲಿದ್ದಾರೆ. ಬೆಳಿಗ್ಗೆ 11.30ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಇಂಡಿಯಾ ಎನರ್ಜಿ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಬಳಿಕ ಮಧ್ಯಾಹ್ನ 2.45ಕ್ಕೆ ಹೆಚ್ ಎ ಎಲ್ ನಿಂದ ಹೆಲಿಕಾಪ್ಟರ್ ಮೂಲಕ ತುಮಕೂರು ಜಿಲ್ಲೆಯ ಗುಬ್ಬಿಗೆ ತೆರಳಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಗುಬ್ಬಿ ತಲುಪಲಿರುವಂತ ಅವರು ಅಲ್ಲಿ ಜಲ ಜೀವನ್ ಮಿಷನ್ ಯೋಜನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.
ಫೆ.6ರಂದೇ ಸಂಜೆ 4.45ಕ್ಕೆ ಗುಬ್ಬಿಯಿಂದ ಬೆಂಗಳೂರಿಗೆ ತೆರಳಲಿರುವಂತ ಅವರು, ಸಂಜೆ 5.20ಕ್ಕೆ ಬೆಂಗಳೂರಿನಿಂದ ದೆಹಲಿಗೆ ಮರಳಲಿದ್ದಾರೆ.