ಪ್ರಧಾನಿ ಮೋದಿ ಜನ್ಮದಿನ : ಬಡಜನರ ಕಲ್ಯಾಣಕ್ಕಾಗಿ ಸೇವಾ ಚಟುವಟಿಕೆ

ಹೊಸದಿಗಂತ ವರದಿ ಮಂಡ್ಯ :

ಸೆ. 17ರಿಂದ ಅ. 2ರವರೆಗೆ ಸೇವಾ ಪಾಕ್ಷಿಕ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಸಿ.ಟಿ. ಮಂಜುನಾಥ್ ತಿಳಿಸಿದರು.
ಸುದ್ಧಿಗೋಷ್ಠಿಘಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರಮೋದಿಯವರ ನಾಯಕತ್ವದಲ್ಲಿ ಕೇಂದ್ರ ಸರ್ಕಾರ ಬಡವರ ಸೇವೆ, ಉತ್ತಮ ಆಡಳಿತ ಮತ್ತು ಕಲ್ಯಾಣಕ್ಕಾಗಿ ಬದ್ಧವಾಗಿದೆ. ದೇಶದ ಜನರಿಗಾಗಿ ಪ್ರಧಾನಮಂತ್ರಿಗಳ ಎಲ್ಲ ಯೋಜನೆಗಳು ಮತ್ತು ಕಾರ‌್ಯಕ್ರಮಗಳ ಮೊದಲ ಆಧ್ಯತೆ ಬಡಜನರ ಕಲ್ಯಾಣಕ್ಕಾಗಿ ಎಂಬುದು ಮನದಟ್ಟಾಗಿದೆ ಎಂದು ಹೇಳಿದರು.

ಸೆ. 17ರಂದು ಪ್ರಧಾನಿ ನರೇಂದ್ರಮೋದಿಯವರ ಹುಟ್ಟುಹಬ್ಬವನ್ನು ಸೇವಾ ಪಾಕ್ಷಿಕ ಅಡಿಯಲ್ಲಿ 15 ದಿನಗಳ ಕಾಲ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸೂಚನೆಯಂತೆ ಅನೇಕ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

17ರಂದು ಯುವ ಮೋರ್ಚಾ ವತಿಯಿಂದ ದೇಶಾದ್ಯಂತ ರಕ್ತದಾನ ಶಿಬಿರ ಏರ್ಪಡಿಸಲಾಗುವುದು. ದಿವ್ಯಾಂಗರಿಗೆ ಕೃತಕ ಅಂಗಾಂಗ ಜೋಡಣಾ ಶಿಬಿರ, ಆಜಾದಿಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಗೆ 75 ಕೆರೆಗಳ ನಿರ್ಮಾಣಕ್ಕೆ ಸರ್ಕಾರ ನಿರ್ದೇಶನ ನೀಡಿದೆ. ಬಿಜೆಪಿ ಕಾರ‌್ಯಕರ್ತರು ನದಿ, ಕೆರೆ, ಬಾವಿಗಳ ಸ್ವಚ್ಚತಾ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದುಘಿ, ಸಸಿಗಳನ್ನು ನೆಡಲಿದ್ದಾರೆ ಎಂದರು.

2025ಕ್ಕೆ ಭಾರತವು ಕ್ಷಯ ರೋಗದಿಂದ ಮುಕ್ತ ಆಗಬೇಕೆಂಬುದು ನರೇಂದ್ರಮೋದಿಯವರ ಸಂಕಲ್ಪವಾಗಿದೆ. ಅದಕ್ಕಾಗಿ ಪ್ರತೀ ಕಾರ‌್ಯಕರ್ತರು, ಜನಪ್ರತಿನಿಧಿಗಳು, ಪದಾಧಿಕಾರಿಗಳು, 5 ಜನ ರೋಗಿಗಳಿಗೆ ಮಾರ್ಗದರ್ಶನ, ಚಿಕಿತ್ಸಾ ವ್ಯವಸ್ಥೆಘಿ, ಪೂರಕ ಬೆಂಬಲ ಕೊಡಲಿದ್ದಾರೆ ಎಂದು ಹೇಳಿದರು.

ಪ್ರಧಾನಮಂತ್ರಿಗಳ ಜೀವನ ಮತ್ತು ಗುರಿಯ ಕುರಿತಾಗಿ ಒಂದು ಪ್ರದರ್ಶಿನಿಯನ್ನು ಜಿಲ್ಲಾ ಮತ್ತು ಮಂಡಲ ಮಟ್ಟದಲ್ಲಿ ಆಯೋಜಿಸಲಾಗುವುದು. ಜನಕಲ್ಯಾಣ ಯೋಜನೆಗಳ ಕುರಿತಾದ ಪುಸ್ತಕ ಪ್ರದರ್ಶನ ವಿಶೇಷವಾಗಿ ಮೋದಿಃ20 ಡ್ರೀಮ್‌ಮೀಟ್ ಡಿಲವರಿ ಪುಸ್ತಕಕ್ಕೆ ಅತಿ ಹೆಚ್ಚು ಪ್ರಚಾರ ಕಲ್ಪಿಸಿಕೊಡಬೇಕು ಎಂದರು.
ಬಿಜೆಪಿ ನಗರಾಧ್ಯಕ್ಷ ವಿವೇಕ್, ಬಿಜೆಪಿ ಮುಖಂಡರಾದ ಶಿವಕುಮಾರ್, ನಾಗಾನಂದ್ ಗೋಷ್ಠಿಯಲ್ಲಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!