ಪ್ರಧಾನಿ ಮೋದಿ ಜನ್ಮದಿನ: ಸ್ವಚ್ಛತಾ ಅಭಿಯಾನಕ್ಕೆ ಸಾಥ್ ಕೊಟ್ಟ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನ. ಹೀಗಾಗಿ, ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು ಮತ್ತು ನಾಯಕರು ಸ್ವಚ್ಛತಾ ಅಭಿಯಾನ ಕೈಗೊಂಡಿದ್ದಾರೆ.

ಇಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್​ಡಿ ಕುಮಾರಸ್ವಾಮಿ ಕೂಡ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡು, ಮೋದಿಯವರ ಹುಟ್ಟುಹಬ್ಬಕ್ಕೆ ಶುಭ ಕೋರಿದರು.

ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ SAIL-ಭಿಲಾಯ್ ಸ್ಟೀಲ್ ಪ್ಲಾಂಟ್‌ಗೆ ಮೊದಲ ಬಾರಿಗೆ ಭೇಟಿ ನೀಡಿದ್ದು, ಯುನಿವರ್ಸಲ್ ರೈಲ್ ಮಿಲ್‌ನಿಂದ ಸ್ವಚ್ಛತಾ ಅಭಿಯಾನವನ್ನು ಪ್ರಾರಂಭಿಸಿದರು. ಅವರು ಇಸ್ಪತ್ ಭವನದಲ್ಲಿ ಸ್ವಚ್ಚತಾ ಪ್ರತಿಜ್ಞೆಯನ್ನು ತೆಗೆದುಕೊಂಡರು.

ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಹೆಚ್.ಡಿ. ಕುಮಾರಸ್ವಾಮಿ, ಭಾರತದ ಸ್ವಚ್ಛತೆಯನ್ನು ಪ್ರತಿಪಾದಿಸಿದವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ. ಬಾಪೂಜಿ ಕನಸನ್ನು ನನಸು ಮಾಡಿದವರು ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿಯವರು. ಸ್ವಚ್ಚ ಭಾರತ ಎನ್ನುವುದು ಬರೀ ಅಭಿಯಾನವಷ್ಟೇ ಅಲ್ಲ, ಅದನ್ನು ನಿತ್ಯ ಆಚರಣೆಯಾಗಿ ಪರಿವರ್ತಿಸಿದ್ದು ನಮ್ಮ ಪ್ರಧಾನಿಗಳು ಎನ್ನುವುದು ನನ್ನ ಅಭಿಪ್ರಾಯ ಎಂದಿದ್ದಾರೆ.

ಮಾನ್ಯ ಪ್ರಧಾನಿಗಳ ಜನ್ಮದಿನವಾದ ಇಂದು ನಾನು ಬಿಲಾಯ್ ಉಕ್ಕು ಕಾರ್ಖಾನೆಯಲ್ಲಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡೆ. ಕಾರ್ಖಾನೆಯ ಕಾರ್ಮಿಕರು, ಅಧಿಕಾರಿಗಳು ನನ್ನೊಂದಿಗೆ ಭಾಗಿಯಾದರು. ಮತ್ತೊಮ್ಮೆ ಪ್ರಧಾನಿಗಳಿಗೆ ಹೃದಯಪೂರ್ವಕವಾಗಿ ಜನ್ಮದಿನದ ಶುಭಾಶಯಗಳನ್ನು ಸಲ್ಲಿಸಲು ಬಯಸುತ್ತೇನೆ ಎಂದು ಸಚಿವ ಹೆಚ್​ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!