ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಹೋದರ ಸೋಮಭಾಯ್ ಮೋದಿ ಇಂದು ಆಗಮಿಸಿದ್ದಾರೆ. ಗುಜರಾತ್‌ನ ವಡೋದರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ಯಲಹಂಕದಲ್ಲಿ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಂತರ ಯಲಹಂಕದಲ್ಲಿರುವ ಸಾಯಿಬಾಬಾ ಮಂದಿರಕ್ಕೆ ಹಾಗೂ ಶ್ರೀಗಂಚಿ ಸಮಾಜ್ ಪೂರ್ಣೇಶ್ವರ ಟ್ರಸ್ಟ್‌ಗೆ ಭೇಟಿ ನೀಡಲಿದ್ದಾರೆ. ತದನಂತರ ಸಂಜೆ 4 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೂ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಮರಳಿ ರಾತ್ರಿ 7:45 ಕ್ಕೆ ಗುಜರಾತ್‌ಗೆ ವಾಪಾಸ್ ಆಗಲಿದ್ದಾರೆ.