ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪುರಸ್ಕೃತರೊಂದಿಗೆ ಇಂದು ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ.
ಕೊರೋನಾ ಕಾರಣದಿಂದ ಸಮಾರಂಭ ಆಯೋಜನೆಗೆ ತೊಂದರೆಯಾಗಿದೆ. ಹೀಗಾಗಿ ಪ್ರಧಾನಿ ಮೋದಿ ವಿಡಿಯೋ ಮುಖೇನ ಪ್ರಶಸ್ತಿ ಪುರಸ್ಕೃತರೊಂದಿಗೆ ಮಾತನಾಡಿ, ಬ್ಲ್ಯಾಕ್ ಚೈನ್ ತಂತ್ರಜ್ಞಾನ ಮೂಲಕ ಡಿಜಿಟಲ್ ಸರ್ಟಿಫಿಕೇಟ್ ನೀಡಲಿದ್ದಾರೆ.
ಈ ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಕೇಂದ್ರ ಇಲಾಖೆ ಸಚಿವೆ ಸ್ಮೃತಿ ಇರಾನಿ ಹಾಗೂ ರಾಜ್ಯ ಸಚಿವ ಡಾ. ಮುಂಜಪರಾ ಮಹೇಂದ್ರಭಾಯಿ ಇರಲಿದ್ದಾರೆ.
ಅಸಾಧಾರಣ ಸಾಮರ್ಥ್ಯ ಪ್ರದರ್ಶಿಸಿದ, ನಾವೀನ್ಯತೆ, ಕ್ರೀಡೆ, ಕಲೆ, ಸಂಸ್ಕೃತಿ, ಸಮಾಜಸೇವೆ, ಶೌರ್ಯ ಹೀಗೆ ಹಲವು ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಪ್ರದರ್ಶಿಸಿದ ಮಕ್ಕಳನ್ನು ಆರಿಸಿ ಈ ಪ್ರಶಸ್ತಿ ನೀಡಲಾಗುತ್ತದೆ. ಪ್ರಧಾನಮಂತ್ರಿ ಬಾಲ ಪುರಸ್ಕಾರ ಪಡೆದ ಮಕ್ಕಳಿಗೆ ಒಂದು ಲಕ್ಷ ರೂ. ನಗದು ಬಹುಮಾನ ಮತ್ತು ಮೆಡಲ್ ನೀಡಲಾಗುತ್ತದೆ. ಇವರಿಗೆ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಭಾಗವಹಿಸುವ ಅವಕಾಶವೂ ಇದೆ.