ನಾಳೆಯಿಂದ ಮತ್ತೆ ಪ್ರಧಾನಿ ಮೋದಿ ವಿದೇಶ ಪ್ರವಾಸ: ಇಲ್ಲಿದೆ ವೇಳಾಪಟ್ಟಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಅಮೆರಿಕ ಸೇರಿ ಹಲವು ರಾಷ್ಟ್ರಗಳ ಪ್ರವಾಸ ಮುಗಿಸಿಕೊಂಡು ಕೆಲ ದಿನಗಳ ಹಿಂದಷ್ಟೇ ಬಂದ ಪ್ರಧಾನಿ ನರೇಂದ್ರ ಮೋದಿ ಅವರೀಗ ಮತ್ತೆ ನಾಳೆ ಫ್ರಾನ್ಸ್‌ ಹಾಗೂ ಯುಎಇ ಪ್ರವಾಸ (PM Modi France Visit) ಕೈಗೊಳ್ಳುತ್ತಿದ್ದಾರೆ.

ಜುಲೈ 13ರಿಂದ ಜುಲೈ 15ರವರೆಗೆ ಮೋದಿ ಅವರು ಅವರು ಮೂರು ದಿನ ಎರಡು ರಾಷ್ಟ್ರಗಳ ಪ್ರವಾಸ ಕೈಗೊಳ್ಳಲಿದ್ದಾರೆ.ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಜುಲೈ 14ರಂದು ಮೋದಿ ಅವರು ಪ್ಯಾರಿಸ್‌ನಲ್ಲಿ ನಡೆಯುವ ಬ್ಯಾಸ್ಟೈಲ್‌ ಡೇ ಪರೇಡ್‌ನಲ್ಲಿ ಭಾಗವಹಿಸಲಿದ್ದು, ಗೆಸ್ಟ್‌ ಆಫ್‌ ಆನರ್‌ ಸ್ವೀಕರಿಸಲಿದ್ದಾರೆ. ಈ ವಿಶೇಷ ಕಾರ್ಯಕ್ರಮದಲ್ಲಿ ಭಾರತ ಸೇನೆಯ ಮೂರೂ ಪಡೆಗಳ ಯೋಧರು ಪಾಲ್ಗೊಳ್ಳಲಿದ್ದಾರೆ. ಇದಾದ ಬಳಿಕ ಮೋದಿ ಅವರು ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್‌ ಮ್ಯಾಕ್ರನ್‌ ಅವರ ಜತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಅವರಿಗಾಗಿ ವಿಶೇಷ ಭೋಜನ ಕೂಟವನ್ನೂ ಆಯೋಜಿಸಲಾಗಿದೆ.

ಫ್ರಾನ್ಸ್‌ನಲ್ಲೂ ಮೋದಿ ಅವರು ಅನಿವಾಸಿ ಭಾರತೀಯರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಹಾಗೆಯೇ, ಭಾರತ ಹಾಗೂ ಫ್ರಾನ್ಸ್‌ ಕಂಪನಿಗಳ ಸಿಇಒಗಳು, ಫ್ರಾನ್ಸ್‌ನ ಪ್ರಮುಖ ಗಣ್ಯರ ಜತೆಗೂ ಮೋದಿ ಚರ್ಚೆ, ಸಂವಾದ ನಡೆಸಲಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಅದರಲ್ಲೂ, ಫ್ರಾನ್ಸ್‌ ಭೇಟಿ ವೇಳೆ 90 ಸಾವಿರ ಕೋಟಿ ರೂಪಾಯಿ ಮೌಲ್ಯದ 26 ರಫೇಲ್‌ ಮರಿನ್‌ ಯುದ್ಧವಿಮಾನಗಳು ಸೇರಿ ಹಲವು ಶಸ್ತ್ರಾಸ್ತ್ರಗಳನ್ನು ಖರೀದಿ ಮಾಡುವುದು ಪ್ರಮುಖವಾಗಿದೆ.

ಅಬುಧಾಬಿ ಪ್ರವಾಸ
ಜುಲೈ 15ರಂದು ಅಬುಧಾಬಿ ಪ್ರವಾಸ ಕೈಗೊಳ್ಳಲಿರುವ ಮೋದಿ, ಯುಎಇ ಅಧ್ಯಕ್ಷ ಶೇಖ್‌ ಮೊಹಮ್ಮದ್‌ ಬಿನ್‌ ಜಯೇದ್‌ ಅಲ್‌ ನಹ್ಯಾನ್‌ ಅವರೊಂದಿಗೂ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಯುಎಇ ಜತೆಗಿನ ಭಾರತದ ಸಂಬಂಧ ವೃದ್ಧಿ, ರಕ್ಷಣೆ, ವ್ಯಾಪಾರ, ಆಹಾರ ಸೇರಿ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಚರ್ಚಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!