ನಿರುದ್ಯೋಗ ಖಾತರಿಯೇ ಪ್ರಧಾನಿ ಮೋದಿ ಗ್ಯಾರಂಟಿ: ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದ್ದು, ನಿರುದ್ಯೋಗ ಖಾತರಿಯೇ ಪ್ರಧಾನಿ ನರೇಂದ್ರ ಮೋದಿ ಅವರ ಗ್ಯಾರಂಟಿಯಾಗಿದೆ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ , ಅಂಕಿಅಂಶಗಳ ಪ್ರಕಾರ ದೇಶದಲ್ಲಿ ಸುಮಾರು 30 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ ಎಂದು ತಿಳಿಸಿದ್ದಾರೆ.

ನಮ್ಮ ಕೋಟ್ಯಂತರ ಯುವಕರು ಉದ್ಯೋಗಕ್ಕಾಗಿ ಕಾಯುತ್ತಿದ್ದಾರೆ. ಆದರೆ, ಕಳೆದ 10 ವರ್ಷಗಳಲ್ಲಿ ಬಿಜೆಪಿ ಸರ್ಕಾರವು ಅಪಪ್ರಚಾರ ಮಾಡಿದ್ದು ಬಿಟ್ಟರೆ, ಈ ಹುದ್ದೆಗಳನ್ನು ಭರ್ತಿ ಮಾಡಲು ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಪ್ರಿಯಾಂಕಾ ಕಿಡಿಕಾರಿದ್ದಾರೆ.

8 ವರ್ಷಗಳಲ್ಲಿ 22 ಕೋಟಿ ಯುವಕರು ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, 7 ಲಕ್ಷ ಮಂದಿಗೆ ಮಾತ್ರ ಕೆಲಸ ಸಿಕ್ಕಿದೆ ಎಂದು 2022ರ ಜುಲೈ ತಿಂಗಳಲ್ಲಿ ಕೇಂದ್ರ ಸರ್ಕಾರವು ಸಂಸತ್ತಿಗೆ ತಿಳಿಸಿದೆ .ವಾರ್ಷಿಕವಾಗಿ ಎರಡು ಕೋಟಿ ಉದ್ಯೋಗ ನೀಡುವುದಾಗಿ ಬಿಜೆಪಿ ಸರ್ಕಾರ ಭರವಸೆ ನೀಡಿತ್ತು. ಆದರೆ, ಖಾಲಿ ಇರುವ ಉದ್ಯೋಗಗಳನ್ನು ನೀಡಲು, ಹೊಸ ಉದ್ಯೋಗಗಳನ್ನು ಸೃಷ್ಟಿಸಲು ಸಾಧ್ಯವಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಉದ್ಯೋಗ ನೀಡುವುದಾಗಿ ಚುನಾವಣೆಯಲ್ಲಿ ಭರವಸೆ ನೀಡುತ್ತಾರೆ. ಆದರೆ, ವಾಸ್ತವದಲ್ಲಿ ನಿರುದ್ಯೋಗ ಖಾತರಿಯೇ ಪ್ರಧಾನಿ ಮೋದಿ ಅವರ ಗ್ಯಾರಂಟಿಯಾಗಿದೆ ಎಂದು ಪ್ರಿಯಾಂಕಾ ಟೀಕಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!