ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರ ಕರ್ನಾಟಕದಲ್ಲಿ ಮಿಂಚಿನ ಸಂಚಾರ ನಡೆಸುತ್ತಿದ್ದಾರೆ.
ನಿನ್ನೆಯಷ್ಟೇ ಬೆಳಗಾವಿ, ಶಿರಸಿ, ದಾವಣಗೆರೆ ಮತ್ತು ಹೊಸಪೇಟೆಯಲ್ಲಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ ನರೇಂದ್ರ ಮೋದಿ ಅವರು ಇಂದು ಬಾಗಲಕೋಟೆಗೆ ಆಗಮಿಸಲಿದ್ದಾರೆ.
ಬಾಗಲಕೋಟೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಿ.ಪಿ ಗದ್ದಿಗೌಡ ಮತ್ತು ವಿಜಯಪುರ ಅಭ್ಯರ್ಥಿ ರಮೇಶ್ ಜಿಗಜಿಣಗಿ ಪರವಾಗಿ ಮತಯಾಚಿಸಲಿದ್ದಾರೆ. ಬಾಗಲಕೋಟೆಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ.