ಪ್ರಧಾನಿ ಮೋದಿ ತಾಯಿ ಹೀರಾಬೆನ್ ಮೋದಿ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗ್ಗೆ ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಜರಾತ್‌ನ ಅನೇಕ ಶಾಸಕರು ಆಸ್ಪತ್ರೆಗೆ ತೆರಳಿ ಪ್ರಧಾನಿ ಮೋದಿ ತಾಯಿ ಆರೋಗ್ಯ ವಿಚಾರಿಸಿದ್ದಾರೆ.

ಮೈಸೂರು ಬಳಿ ಪ್ರಧಾನಿ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರ ಕಾರು ಅಪಘಾತ ಸಂಭವಿಸಿ ಗಾಯಗೊಂಡ ಒಂದು ದಿನದ ನಂತರ ಹೀರಾಬೆನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!