Saturday, February 4, 2023

Latest Posts

ನೇಪಾಳ ವಿಮಾನ ದುರಂತಕ್ಕೆ ಕಂಬನಿ ಮಿಡಿದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ನೇಪಾಳದಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪ್ರಧಾನಿ ಮೋದಿ (PM MODI) ಸಂತಾಪ ಸೂಚಿಸಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ವಿಮಾನ ಅಪಘಾತದಲ್ಲಿ ಭಾರತೀಯರು ಸೇರಿದಂತೆ ಅಮೂಲ್ಯ ಜೀವಗಳನ್ನು ಕಳೆದುಕೊಂಡಿರುವುದು ನೋವು ತಂದಿದೆ. ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ ಎಂದಿದ್ದಾರೆ.

ಕಠ್ಮಂಡುದಿಂದ ಪೋಖಾರಾಗೆ ಹೊರಟಿದ್ದ ಯೇತಿ ಏರ್ಲೈನ್ಸ್ ಎಟಿಆರ್ 72 ವಿಮಾನವು ಇಂದು ಬೆಳಿಗ್ಗೆ ಅಪಘಾತಕ್ಕೀಡಾಗಿತ್ತು. ಇನ್ನು ವಿಮಾನ ಪತನಗೊಂಡ ಸ್ಥಳದಲ್ಲಿ ರಕ್ಷಣಾ ಕಾರ್ಯಚರಣೆ ಮುಂದುವರಿದೆ. ಸ್ಥಳಕ್ಕೆ ನೇಪಾಳ ಸಿಎಂ ಪ್ರಚಂಡ ಸೇರಿದಂತೆ ಅನೇಕರು ಭೇಟಿ ನೀಡಿ ಅಪಘಾತದ ಕುರಿತಂತೆ ಮಾಹಿತಿ ಪಡೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!