Sunday, June 4, 2023

Latest Posts

ಪ್ರಧಾನಿ ಮೋದಿ ಅವರ ಭದ್ರತೆಯಲ್ಲಿ ಲೋಪ: ಪಂಜಾಬ್​ ಡಿಜಿಪಿ ಸಹಿತ 14 ಉನ್ನತಾಧಿಕಾರಿಗಳಿಗೆ ನೋಟಿಸ್​​ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಂಜಾಬಿನಲ್ಲಿ ಉಂಟಾದ ಪ್ರಧಾನಿ ಮೋದಿ ಅವರ ಭದ್ರತಾ ಲೋಪದ ಕುರಿತು ಈಗಾಗಲೇ ತನಿಖೆಗೆ ಆದೇಶ ನೀಡಿರುವ ಕೇಂದ್ರ ಗೃಹ ಸಚಿವಾಲಯ, ಪಂಜಾಬ್​ ಡಿಜಿಪಿ ಸೇರಿದಂತೆ 14 ಉನ್ನತಾಧಿಕಾರಿಗಳಿಗೆ ನೋಟಿಸ್​​ ಜಾರಿ ಮಾಡಿದ್ದು, ಮುಂದಿನ 24 ಗಂಟೆಯೊಳಗೆ ಉತ್ತರ ನೀಡುವಂತೆ ಸೂಚನೆ ನೀಡಿದ್ದಾರೆ.
ಕೇಂದ್ರ ತಂಡ ಪಂಜಾಬ್​ ಡಿಜಿಪಿ ಸಿದ್ಧಾರ್ಥ್​​ ಚಟ್ಟೋಪಾಧ್ಯಾಯ ಸೇರಿ ಐದು ಜಿಲ್ಲೆಯ 13 ಉನ್ನತ ಅಧಿಕಾರಿಗಳಿಗೆ ನೋಟಿಸ್​ ಜಾರಿ ಮಾಡಿದೆ. ಜೊತೆಗೆ ಫ್ಲೈ ಓವರ್​​ನಲ್ಲಿ ಪ್ರಧಾನಿ ಮೋದಿ ತೆರಳುತ್ತಿದ್ದ ರಸ್ತೆಗೆ ಅಡ್ಡಿಪಡಿಸಿರುವ 150 ಅಪರಿಚಿತರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಈ ಸಂಬಂಧ ಫಿರೋಜ್​ಪುರ್​​ ಸಮೀಪದ ಕುಲ್​ಗರ್ಹಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಇದರ ಜೊತೆಗೆ ಕೇಂದ್ರದ ತ್ರಿಸದಸ್ಯ ಸಮಿತಿಯಿಂದ ತನಿಖೆ ಕೂಡ ಆರಂಭಗೊಂಡಿದೆ.
ಇನ್ನು ಪಂಜಾಬ್ ಸರಕಾರ ಕೂಡ ತನಿಖೆ ನಡೆಸುತ್ತಿದ್ದು, ಈಗಾಗಲೇ ಪ್ರಾಥಮಿಕ ವರದಿ ಕೇಂದ್ರಕ್ಕೆ ಸಲ್ಲಿಕೆ ಮಾಡಲಾಗಿದೆ. ಸುಪ್ರೀಂಕೋರ್ಟ್​​ನಲ್ಲೂ ಇದರ ವಿಚಾರಣೆ ಆರಂಭಗೊಂಡಿದ್ದು, ಸೋಮವಾರಕ್ಕೆ ಮುಂದೂಡಿಕೆ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!