March 23, 2026
Monday, March 23, 2026
spot_img

ಲೋಕಸಭೆಯಲ್ಲಿ ಮಧ್ಯಪ್ರಾಚ್ಯ ಕದನದ ಕುರಿತು ಪ್ರಧಾನಿ ಮೋದಿ ಮಾತು: ಪ್ರಿಯಾಂಕಾ ಗಾಂಧಿ ವಾದ್ರಾ ರಿಯಾಕ್ಷನ್ ಏನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆಯಲ್ಲಿ ಪ್ರಧಾನಿ ಮೋದಿ ಇಂದು ಹೊಸತು ಏನು ಅಂದಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ಲೋಕಸಭೆಯಲ್ಲಿ ಇಂದು ಮಧ್ಯ ಪ್ರಾಚ್ಯದಲ್ಲಿನ ಸಂಘರ್ಷದ ನಡುವೆ ಭಾರತ ಸವಾಲುಗಳನ್ನು ಯಾವ ರೀತಿ ಎದುರಿಸುತ್ತಿದೆ ಎಂದು ಪ್ರಧಾನಿ ಮೋದಿ ನೀಡಿದ ವಿವರಣೆ ಕುರಿತು ಪ್ರತಿಕ್ರಿಯಿಸಿದ ಅವರು, ಅವರು ಕೇವಲ ದೇಶದ ಸದ್ಯದ ಪರಿಸ್ಥಿತಿಯನ್ನು ತಿಳಿಸಿದ್ದು, ಬೇರೆ ಯಾವ ಹೊಸ ವಿಚಾರ ಅಂದಿಲ್ಲ ಎಂದು ಹೇಳಿದರು.

ಈ ಕುರಿತು ಚರ್ಚೆ ನಡೆಬೇಕು ಎಂದು ನಾವು ನೊಟೀಸ್ ನೀಡಿದ್ದೆವು. ಇದರಿಂದ ಎಲ್ಲರಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಸಿಗುತ್ತದೆ. ಆದರೆ ಇಂದು ಕೇವಲ ಅವರು ಮಾತ್ರ ಮಾತನಾಡಿದ್ದಾರೆ ಎಂದು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !