ನ. 10 ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನವೆಂಬರ್ 10 ರಂದು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಲಿದ್ದು,ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತನಾಡಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 2 ನೇ ಟರ್ಮಿನಲ್ ನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.
ಅಲ್ಲದೇ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಮೋದಿ ಬೆಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಭೆ ನಡೆಸಿದರು. ಸಭೆಯಲ್ಲಿ ಮಾಜಿ ಸಚಿವ ಡಿ.ವಿ ಸದಾನಂದಗೌಡ, ಸಚಿವ ಅಶ್ವಥ್ ನಾರಾಯಣ್ ಮತ್ತಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!