ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮೂರು ದಿನಗಳ ಐತಿಹಾಸಿಕ ಫ್ರಾನ್ಸ್ ಭೇಟಿಯನ್ನು ಮುಕ್ತಾಯಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ಇಂದು ಅಮೆರಿಕದತ್ತ ಪ್ರಯಾಣ ಬೆಳೆಸಿದ್ದಾರೆ.
ಮೋದಿಯವರೊಂದಿಗಿನ ಆತ್ಮೀಯ ಸಂಬಂಧದ ಸೂಚಕವಾಗಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಭಾರತದ ಪ್ರಧಾನಿ ಮೋದಿ ಅವರಿಗೆ ವಿಮಾನ ನಿಲ್ದಾಣದಲ್ಲಿ ಬೀಳ್ಕೊಡುಗೆ ನೀಡಿದ್ದಾರೆ. ಈ ವೇಳೆ ಇಬ್ಬರೂ ನಾಯಕರು ಆತ್ಮೀಯ ಅಪ್ಪುಗೆಯನ್ನು ವಿನಿಮಯ ಮಾಡಿಕೊಂಡರು.
ಪ್ರಧಾನಿ ಮೋದಿ ಇಂದು ಫ್ರಾನ್ಸ್ನ ಮಾರ್ಷಿಲ್ಲೆಯಿಂದ ವಾಷಿಂಗ್ಟನ್ಗೆ ವಿಮಾನದ ಮೂಲಕ ತೆರಳಿದ್ದಾರೆ. ಈ ವೇಳೆ ಅವರನ್ನು ಬೀಳ್ಕೊಡಲು ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಮಾರ್ಷಿಲ್ಲೆ ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ. ಇದು ಎರಡೂ ರಾಷ್ಟ್ರಗಳ ನಡುವಿನ ಬಲವಾದ ದ್ವಿಪಕ್ಷೀಯ ಸಂಬಂಧಗಳನ್ನು ಒತ್ತಿಹೇಳಿತು.