ಹೊಸದಿಗಂತ ಡಿಜಿಟಲ್ ಡೆಸ್ಕ್ :
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಮತ್ತೊಮ್ಮೆ ಆಗಮಿಸುತ್ತಿದ್ದಾರೆ. ಏಪ್ರಿಲ್ 9ರಂದು ಬಂಡೀಪುರಕ್ಕೆ ಪ್ರಧಾನಿ ಭೇಟಿ ನೀಡುತ್ತಿರುವ ಹಿನ್ನೆಲೆ ಇಂದಿನಿಂದಲೇ ಬಂಡೀಪುರ ಅರಣ್ಯದಲ್ಲಿ ಪ್ರವಾಸಿಗರಿಗೆ ಸಫಾರಿ ನಿಷೇಧಿಸಲಾಗಿದೆ.
ಇಂದಿನಿಂದ ಏಪ್ರಿಲ್ 9ರವರೆಗೆ ಬಂಡೀಪುರ ವ್ಯಾಪ್ತಿಯ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್ಗಳಲ್ಲಿ ಪ್ರವಾಸಿಗರ ವಾಸ್ತವ್ಯಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ.
ರಸ್ತೆ ನಿರ್ವಹಣೆ, ಪೂರ್ವ ಸಿದ್ಧತೆ, ಪ್ರಧಾನಿ ರಕ್ಷಣೆ ದೃಷ್ಟಿಯಿಂದ ನಿರ್ಬಂಧಿಸಿ ಚಾಮರಾಜನಗರ ಡಿಸಿ ಡಿ.ಎಸ್.ರಮೇಶ್ ಆದೇಶ ಹೊರಡಿಸಿದ್ದಾರೆ.