ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ನಾಳೆಯಿಂದ ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್ ದೇಶಗಳಿಗೆ ನಾಲ್ಕು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಅವರ ಭೇಟಿಯ ವೇಳೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಆಗಸ್ಟ್ 22 ರಿಂದ 25ರ ವರೆಗೆ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ಗೆ ಮೂರು ದಿನಗಳ ಭೇಟಿಯ ವೇಳೆ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಮಟಮೆಲಾ ಸಿರಿಲ್ ರಮಾಫೋಸಾ ಅವರ ಆಹ್ವಾನದ ಮೇರೆಗೆ 15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಅದಲ್ಲದೆ ಮೋದಿ ಅವರು ಜೋಹಾನ್ಸ್‌ಬರ್ಗ್‌ನಲ್ಲಿರುವ ಕೆಲವು ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.
ದಕ್ಷಿಣ ಆಫ್ರಿಕಾಕ್ಕೆ ಭೇಟಿ ನೀಡಿದ ನಂತರ ಆಗಸ್ಟ್ 25 ರಂದು ಪ್ರಧಾನ ಮಂತ್ರಿ ಗ್ರೀಸ್ ದೇಶಕ್ಕೆ ಭೇಟಿ ನೀಡಲಿದ್ದಾರೆ. 40 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಗ್ರೀಸ್‌ಗೆ ಭೇಟಿ ನೀಡುತ್ತಿರುವುದು ಇದೇ ಮೊದಲು ಎಂಬ ಹೆಗ್ಗಳಿಕೆಗೆ ಪ್ರಧಾನಿ ಮೋದಿ ಭಾಜನರಾಗಲಿದ್ದಾರೆ. ಅವರ ಭೇಟಿಯ ವೇಳೆ ಗ್ರೀಸ್ ಪ್ರಧಾನಿ ಮಿಟ್ಸೊಟಾಕಿಸ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಉಭಯ ದೇಶಗಳ ನಡುವಿನ ಸಂಬಂಧ ಅಭಿವೃದ್ಧಿ ಕುರಿತಾಗಿ ಚರ್ಚೆ ನಡೆಸಲಿದ್ದಾರೆ ಎಂದು ಸಚಿವಾಲಯ ಹೇಳಿದೆ.