ಹೊಸದಿಗಂತ ವರದಿ, ಮಂಗಳೂರು:
ಪ್ರಭು ಶ್ರೀರಾಮನ ಜನ್ಮಭೂಮಿ ಅಯೋಧ್ಯೆಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಈ ಹಿನ್ನೆಲೆಯಲ್ಲಿ ವ್ಯಾಪಕ ಭದ್ರತಾ ಕ್ರಮ ಕೈಗೊಳ್ಳಲಾಗಿದೆ.
ಮೋದಿ ಭೇಟಿಗೂ ಪೂರ್ವಭಾವಿಯಾಗಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ ಖುದ್ದಾಗಿ ಇಲ್ಲಿನ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ. ಅಯೋಧ್ಯೆ ಸಂಪೂರ್ಣ ಪೊಲೀಸ್ ಭದ್ರಕೋಟೆಯಾಗಿದೆ. ಡ್ರೋನ್‌ಗಳ ಮೂಲಕವೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.