ಕುಮಾರಸ್ವಾಮಿಗೆ ಪ್ರಧಾನಿ ಮೋದಿ ವಿಶ್: ನಿಮ್ಮ ಪ್ರೀತಿ, ವಿಶ್ವಾಸ, ವಾತ್ಸಲ್ಯಕ್ಕೆ ನಾನು ಋಣಿ ಎಂದ ಮಾಜಿ ಸಿಎಂ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹುಟ್ಟು ಹಬ್ಬವಕ್ಕೆ ಪ್ರಧಾನಿ ಮೋದಿ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ನನ್ನ ಶುಭ ಹಾರೈಕೆಗಳು . ನಾವು ಹಲವು ವರ್ಷಗಳಿಂದ ನಿಕಟವಾಗಿ ಸಂವಹನ ನಡೆಸಿದ್ದೇವೆ, ವಿಶೇಷವಾಗಿ ಕರ್ನಾಟಕದ ಪ್ರಗತಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ.ಜನರ ಸೇವೆಯಲ್ಲಿ ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ಎಕ್ಸ್ ಗೆ ಪ್ರತಿಕ್ರಿಯಿಸಿರುವ ಹೆಚ್‍ಡಿಕೆ, ತಮಗೆ ತುಂಬು ಹೃದಯದ ಧನ್ಯವಾದಗಳು ಸರ್. ನಿಮ್ಮ ಪ್ರೀತಿ, ವಿಶ್ವಾಸ, ವಾತ್ಸಲ್ಯಕ್ಕೆ ನಾನು ಚಿರಋಣಿ ಆಗಿದ್ದೇನೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!