Monday, August 8, 2022

Latest Posts

ಪ್ರಧಾನಿ ಮೋದಿ ಅಮೆರಿಕ ಪ್ರವಾಸ ಕೊನೆ ದಿನ : ಸಂಜೆ ವಿಶ್ವಸಂಸ್ಥೆ ಸಾಮಾನ್ಯ ಸಭೆ ಉದ್ದೇಶಿಸಿ ಭಾಷಣ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಪ್ರಧಾನಿ ಮೋದಿ ಅಮೆರಿಕ ಪ್ರವಾಸದಲ್ಲಿದ್ದು, ಇಂದು ಸಂಜೆ 76 ನೇ ವಿಶ್ವಸಂಸ್ಥೆ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಕಳೆದ ಎರಡು ದಿನಗಳಿಂದ ಸಭೆಗಳು, ಮಾತುಕತೆಗಳನ್ನು ಪ್ರಧಾನಿ ಮೋದಿ ನಿನ್ನೆ ನ್ಯೂಯಾರ್ಕ್‌ಗೆ ತೆರಳಿದ್ದಾರೆ.
ನಿನ್ನೆ ಅಮೆರಿಕ ಅಧ್ಯಕ್ಷ ಜೋ ಬಿಡೆನ್, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಜೊತೆ ಪ್ರಧಾನಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.
ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ಜಪಾನ್ ಪ್ರಧಾನಿ ಯೋಶಿಹಿಡೆ ಸುಗ ಅವರ ಜೊತೆ ಕೂಡ ಮಾತುಕತೆ ನಡೆದಿದೆ. ಅಷ್ಟೇ ಅಲ್ಲದೆ ಭಾರತದಲ್ಲಿ ಹೂಡಿಕೆಗಳನ್ನು ಆಕರ್ಷಿಸಲು ಜಾಗತಿಕ ಸಿಇಒಗಳ ಜೊತೆ ಪ್ರಧಾನಿ ಮೋದಿ ಮಾತನಾಡಿದ್ದಾರೆ.
ಇಂದು ಪ್ರಧಾನಿ ಮೋದಿ ಅಮೆರಿಕ ಭೇಟಿ ಮುಗಿಯಲಿದ್ದು, ಸಂಜೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಮಾತನಾಡಲಿದ್ದಾರೆ.
ಇದರಲ್ಲಿ ಕೋವಿಡ್-19  ಹಾಗೂ ಜಾಗತಿಕ ಸಮಸ್ಯೆ, ಭಯೋತ್ಪಾದನೆ ನಿಗ್ರಹ, ಹವಾಮಾನ ಬದಲಾವಣೆ ಮುಂತಾದ ವಿಷಯಗಳ ಬಗ್ಗೆ ಮಾತನಾಡಲಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss